ಇಂದಿನಿಂದ ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳದವರ ಮೇಲೆ ಕಠಿಣ ನಿಯಮ ಜಾರಿ – ಜಿಲ್ಲಾಧಿಕಾರಿ ವಾರ್ನಿಂಗ್

ಮಾಲ್ ಮತ್ತು ಚಿತ್ರ ಮಂದಿರಗಳ ಪ್ರವೇಶಕ್ಕೆ ಕೋವಿಡ್ ಲಸಿಕೆ ಕಡ್ಡಾಯ ನಿಯಮವನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲೆಯಲ್ಲಿ ಜಾರಿಗೊಳಿಸಿದ್ದು, ಈ ಕುರಿತು ಜಿಲ್ಲಾಧಿಕಾರಿ ರಾಜೇಂದ್ರ ಅವರು ಮಾಹಿತಿ ನೀಡಿದ್ದಾರೆ.

ಮಲ್ಟಿಪ್ಲೆಕ್ಸ್ ಗಳು, ಥಿಯೇಟರ್ ಗಳು, ಚಿತ್ರಮಂದಿರಗಳಿಗೆ ಎರಡು ಕೋವಿಡ್ ಲಸಿಕೆ ಪಡೆದ ಪ್ರಮಾಣ ಪತ್ರ ನೀಡಿದರೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗುವುದು. ಎಲ್ಲರೂ ಲಸಿಕೆಯನ್ನು ತೆಗೆದುಕೊಳ್ಳಲೇಬೇಕು ಎಂದು ಅವರು ಎಚ್ಚರಿಸಿದ್ದಾರೆ.


Ad Widget

Ad Widget

Ad Widget

ಈ ಬಗ್ಗೆ ಕಟ್ಟು ನಿಟ್ಟಾದ ಕ್ರಮವನ್ನು ಜಾರಿಗೆ ತರಲಾಗುವುದು. ಅಧಿಕಾರಿಗಳು ಇನ್ನು ಮುಂದೆ ಸಾರ್ವಜನಿಕವಾಗಿ ಲಸಿಕೆ ಹಾಕಿಸಿಕೊಳ್ಳದವರಲ್ಲಿ ಪ್ರಶ್ನಿಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

Leave a Reply

error: Content is protected !!
Scroll to Top
%d bloggers like this: