ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ವ್ಯಕ್ತಿ | ಗ್ರಾ.ಪಂ.ಸದಸ್ಯೆ ಆತ್ಮಹತ್ಯೆ
ಕೊಡಗು : ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಗೆ ಯತ್ನಿಸಿದ ಗ್ರಾ.ಪಂ.ಸದಸ್ಯೆಯೊಬ್ಬರು ಮೃತಪಟ್ಟ ಘಟನೆ ಮಡಿಕೇರಿಯಿಂದ ವರದಿಯಾಗಿದೆ.
ಮಡಿಕೇರಿ ತಾಲೂಕಿನ ಅರುವತ್ತೊಕ್ಲು ಗ್ರಾಮ ಪಂಚಾಯತ್ ಸದಸ್ಯೆ ಎಚ್.ಆರ್.ರಮ್ಯಾ (28) ಮೃತಪಟ್ಟಿದ್ದು, ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.
ಕೈಕೇರಿ ಗ್ರಾಮದಲ್ಲಿ ವಾಸವಿದ್ದ ಇವರು, ಅ.11 ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಮೈಸೂರು ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ತಾಯಿ ಮನೆಯಲ್ಲಿದ್ದರು.
ಶನಿವಾರ ರಾತ್ರಿ ಮತ್ತೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಮೈಸೂರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ. ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ರಮ್ಯ ಸಹೋದರ ವಿನೋದ್ ದೂರು ದಾಖಲಿಸಿದ್ದಾರೆ.
ಮೊದಲ ಪತಿಯಿಂದ ದೂರವಾಗಿದ್ದ ರಮ್ಯಾಳನ್ನು ಪಾಲಿಬೆಟ್ಟದ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಅಲ್ಲದೆ ಡೆತ್ ನೋಟ್ ನಲ್ಲಿ ಈ ಬಗ್ಗೆ ರಮ್ಯಾ ಉಲ್ಲೇಖಿಸಿದ್ದಾರೆ ಎಂದು ತಿಳಿದು ಬಂದಿದೆ.
ಪಾಲಿಬೆಟ್ಟದ ವ್ಯಕ್ತಿ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.
ಸದ್ಯದಲ್ಲೇ ಬರಲಿದೆ ವಾಟ್ಸಪ್ ನ ಹೊಸ ಫೀಚರ್ಸ್!!|ಯಾವ ರೀತಿಯ ಬದಲಾವಣೆ ಬರಲಿದೆ ಎಂಬುದರ ಬಗೆಗಿದೆ ಡೀಟೇಲ್ಸ್
ಬಡಗನ್ನೂರು : ಪಾದೆಕರ್ಯದಲ್ಲಿ ಸುಬ್ರಹ್ಮಣ್ಯ ಭಟ್,ಶಾರದಾ ದಂಪತಿಗಳು ನೇಣು ಬಿಗಿದು ಆತ್ಮಹತ್ಯೆ