ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ಸಿಂಚನಾಲಕ್ಷ್ಮಿಗೆ ಸನ್ಮಾನ

Share the Article

ಪುತ್ತೂರು: ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಕೆಟಗರಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ 106ನೇ ರ‍್ಯಾಂಕ್‌ಗಳಿಸುವುದರ ಮೂಲಕ ಪುತ್ತೂರು ತಾಲೂಕಿನಲ್ಲಿ ಅಮೋಘ ಸಾಧನೆಗೈದ ವಿವೇಕಾನಂದ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿನಿ ಸಿಂಚನಾಲಕ್ಷ್ಮಿ ರವರ ಮನೆಗೆ ತೆರಳಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.

ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ರವರು ಸಿಂಚನಾಲಕ್ಷ್ಮಿ ರವರಿಗೆ ಶಾಲು ಹೊದಿಸಿ ಪುಸ್ತಕ ಮತ್ತು ಸ್ಮರಣಿಕೆ ನೀಡಿ ಅಭಿನಂದಿಸಿದರು. ಈಕೆ ಪುತ್ತೂರಿನ ಬಂಗಾರಡ್ಕದ ಮುರಳೀಧರ ಭಟ್ ಮತ್ತು ಶೋಭಾ ಬಿ ದಂಪತಿಗಳ ಪುತ್ರಿ. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಸಂತೋಷ್ ಬಿ, ಉಪನ್ಯಾಸಕರಾದ ಹರೀಶ್ ಭಟ್, ಮುರಳಿ ಪಿ.ಜಿ ಮತ್ತಿತರರು ಉಪಸ್ಥಿತರಿದ್ದರು.

Leave A Reply