ಕೊಣಾಜೆ : ಬಿಜೆಪಿ ಕಾರ್ಯಕರ್ತನ ಕೊಲೆಯತ್ನ

Share the Article

ಮಂಗಳೂರು :ಬಿಜೆಪಿ ಕಾರ್ಯಕರ್ತನ ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಸಮೀಪ ನಿನ್ನೆ ತಡರಾತ್ರಿ ನಡೆದಿದೆ.

ಬಿಜೆಪಿ ಕಾರ್ಯಕರ್ತ , ಕೊಣಾಜೆ ಗ್ರಾ.ಪಂ ಮಾಜಿ ಸದಸ್ಯ ಪ್ರಕಾಶ್ ಶೆಟ್ಟಿ (38) ಎಂಬವರ ಕೊಲೆಗೆ ಯತ್ನಿಸಲಾಗಿದೆ. ಬೈಕಲ್ಲಿ ಬಂದ ಮೂವರು ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ.

ಸ್ನೇಹಿತ ಮಂಜುನಾಥ್ ಜೊತಗೆ ಬೈಕಿನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ದುಷ್ಕರ್ಮಿಗಳು ತಲವಾರು ಬೀಸಿದ್ದಾರೆ. ಪವಾಡಸದೃಶವಾಗಿ ತಲವಾರು ದಾಳಿ ಕೈಗೆ ಮಾತ್ರ ಬಿದ್ದಿದೆ. ಗಾಯಾಳು ಪ್ರಕಾಶ್ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ವಾರ ಕೊಣಾಜೆ ಜಂಕ್ಷನ್ ನ ಕೊಣಾಜೆ ಸ್ಟೋರ್ಸ್ & ಸ್ವೀಟ್ಸ್ ಮಳಿಗೆಯ ಮಾಲಕ ಉಸ್ಮಾನ್ ಎಂಬಾತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಇದಕ್ಕೆ ಪ್ರತೀಕಾರವಾಗಿ ದಾಳಿ ನಡೆದಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Leave A Reply