ಮಂಗಳೂರು | ಪ್ರತಿಷ್ಠಿತ ವಕೀಲ ಕೆ. ಎಸ್. ಎನ್ ರಾಜೇಶ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ | ಇಂಟರ್ನಶಿಪ್ ಗೆ ಬಂದಿದ್ದ ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ, ದೂರು ದಾಖಲು

ಮಂಗಳೂರಿನ ಲೋಕಾಯುಕ್ತ ಮತ್ತು ಎಸಿಬಿ ವಿಶೇಷ ವಕೀಲರಾಗಿರುವ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Ad Widget

ರಾಜೇಶ್ ಭಟ್ ಕಚೇರಿಯಲ್ಲಿ ಉತ್ತರ ಪ್ರದೇಶ ಮೂಲದ ವಿದ್ಯಾರ್ಥಿನಿ ಇಂಟರ್ನಶಿಪ್ ಮಾಡಲು ಬಂದಿದ್ದಳು. ಕಚೇರಿಯಲ್ಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆನ್ನಲಾಗಿದೆ. ಖಾಸಗಿ ಅಂಗಗಳನ್ನು ಮುಟ್ಟಿ ಅಸಭ್ಯವಾಗಿದ ವರ್ತಿಸಿದ್ದಾರೆಂದು ಸಂತ್ರಸ್ತೆ ದೂರು ನೀಡಿದ್ದಾರೆ.

Ad Widget . . Ad Widget . Ad Widget . Ad Widget

Ad Widget

ಘಟನೆಯ ಬಳಿಕ ಸಂತ್ರಸ್ತೆಗೆ ಕರೆ ಮಾಡಿರುವ ರಾಜೇಶ್, ಕೆಲಸಕ್ಕೆ ಬರುವಂತೆ ಸಂತ್ರಸ್ತೆಯನ್ನು ಪರಿಪರಿಯಾಗಿ ಬೇಡಿಕೊಂಡಿದ್ದಾರೆ. ಗೊತ್ತಿಲ್ಲದೆ ತಪ್ಪು ಮಾಡಿದೆ. ಇನ್ನು ಮುಂದೆ ಆ ರೀತಿ ಆಗದಂತೆ ನೋಡಿಕೊಳ್ಳುತ್ತೇನೆ. ದಯವಿಟ್ಟು ಕಚೇರಿಗೆ ಬಾ ಎಂದು ಕಣ್ಣೀರಿಟ್ಟಿದ್ದಾರೆ.

Ad Widget
Ad Widget Ad Widget

‘ನಿಮ್ಮ ಮನೆಯಲ್ಲಿ ನಿಮಗೆ ಪತ್ನಿ ಇಲ್ಲವೆ, ನಿಮಗೆ ವಯಸ್ಸಾಗಿದೆ. ನಿಮ್ಮ ಮಗಳನ್ನು ಇದೇ ರೀತಿ ನೋಡುತ್ತೀರಾ ಎಂದು ಸಂತ್ರಸ್ತೆ ರಾಜೇಶ್ ವಿರುದ್ಧ ಆಕ್ರೋಶ ಹೊರಹಾಕಿದ್ದಾಳೆ. ನನಗೆ ಯಾರು ಇಲ್ಲ ಅಂದುಕೊಂಡು ದುರ್ಬಳಕೆ ಮಾಡಿಕೊಳ್ಳಲು ಯತ್ನಿಸಿದ್ದೀರಿ. ನೀವು ಶ್ರೀಮಂತರು, ಏನು ಬೇಕಾದರೂ ಮಾಡುತ್ತೀರಿ. ಅದನ್ನೆಲ್ಲ ನೋಡಿಕೊಂಡು ಸುಮ್ಮನಿರಲು ಸಾಧ್ಯವಾಗುವುದಿಲ್ಲ. ಇನ್ನು ಮುಂದೆ ನನ್ನ ನಂಬರ್‌ಗೆ ಕರೆ ಮಾಡಬೇಡಿ’ ಎಂದು ರಾಜೇಶ್‌ರನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು ಫೋನ್ ಸಂಪರ್ಕ ಕಡಿತಗೊಳಿಸಿದ್ದಾಳೆ.

12 ಕ್ಕೂ ಹೆಚ್ಚು ಬ್ಯಾಂಕ್‌ಗಳಿಗೆ ರಾಜೇಶ್ ಭಟ್, ಕಾನೂನು ಸಲಹೆಗಾರರಾಗಿದ್ದಾರೆ. ಇದೀಗ ರಾಜೇಶ್ ಭಟ್ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸಂಘಟನೆಯ ನಿಯೋಗವೊಂದು ಮಂಗಳೂರು ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಲೈಂಗಿಕ ಕಿರುಕುಳ ನೀಡಿರುವ ಕೆ.ಎಸ್.ಎನ್. ರಾಜೇಶ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ದೂರು ಸಲ್ಲಿಸಿದ್ದಾರೆ.

ಕೆ.ಎಸ್.ಎನ್ ರಾಜೇಶ್ ಇಂಟರ್ನ್‌ಶಿಪ್‌ಗೆ ಬಂದ ಅನೇಕ ಯುವತಿಯರ ಜೊತೆ ಹೀಗೆ ನಡೆದುಕೊಂಡಿದ್ದಾರೆ. ವಾಟ್ಸ್‌ಆ್ಯಪ್‌ನಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Leave a Reply

error: Content is protected !!
Scroll to Top
%d bloggers like this: