ಮಂಗಳೂರು | ಐವನ್ ಡಿಸೋಜಾ ಮನೆಗೆ ಮುತ್ತಿಗೆ ಹಾಕಿದ ಬಜರಂಗದಳದ ಕಾರ್ಯಕರ್ತರು, ಹಲವರು ಪೊಲೀಸರ ವಶಕ್ಕೆ

ಮಂಗಳೂರು: ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಅವರ ಮನೆಗೆ ಬಜರಂಗದಳ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಇಂದು ನಡೆದಿದೆ.

ಕೇಸರಿ ಬಟ್ಟೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಹಿನ್ನಲೆಯಲ್ಲಿ, ಬಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಈ ವೇಳೆ ಸ್ಥಳಕ್ಕಾಗಮಿಸಿದ ಮಂಗಳೂರು ದಕ್ಷಿಣ ಪೊಲೀಸರು ಮುತ್ತಿಗೆ ಯತ್ನವನ್ನು ವಿಫಲಗೊಳಿಸಿದರು.ಬಜರಂಗದಳದ ಕೆಲ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget
error: Content is protected !!
Scroll to Top
%d bloggers like this: