ಪುತ್ತೂರು: ಅಪರಿಚಿತರಿಂದ ವಿದ್ಯಾರ್ಥಿ ಸಹಿತ ಇಬ್ಬರ ಮೇಲೆ ಹಲ್ಲೆ: ಗಾಯಾಳುಗಳು ಆಸ್ಪತ್ರೆಗೆ ದಾಖಲು

ಪುತ್ತೂರು: ಅಪರಿಚಿತ ವ್ಯಕ್ತಿಗಳಿಬ್ಬರು ಕಾಲೇಜು ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಯೊಬ್ಬನ ಸಹಿತ ಇಬ್ಬರ ಮೇಲೆ ಹಲ್ಲೆ ನಡೆಸಿ ಪರಾರಿಯಾದ ಘಟನೆ ಗುರುವಾರ ಸಂಜೆ ಪುತ್ತೂರು ನಗರದಲ್ಲಿ ನಡೆದಿದೆ.

ಪುತ್ತೂರು ತಾಲೂಕಿನ ಚಿಕ್ಕಮುಳ್ಳೂರು ಗ್ರಾಮದ ಸಾಲ್ಮರ ತಾರಿಗುಡ್ಡೆ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರ ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜ್ ನ ವಿದ್ಯಾರ್ಥಿ ಮಹಮ್ಮದ್ ಝಿಯಾದ್(17) ಮತ್ತು ಜಿಡೆಕಲ್ಲು ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಮಹಮ್ಮದ್ ಇಜಾಝ್(20) ಹಲ್ಲೆಗೊಳಗಾದವರು ಎಂದು ತಿಳಿದು ಬಂದಿದೆ.

ಝಿಯಾದ್ ಅವರು ಕಾಲೇಜು ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆಯಲ್ಲಿ ಹಿಂಬಾಗದಿಂದ ಬಂದ ದ್ವಿಚಕ್ರ ವಾಹನ ಆತನಿಗೆ ಢಿಕ್ಕಿ ಹೊಡೆದಿತ್ತು. ಇದರಿಂದಾಗಿ ಅವರು ರಸ್ತೆಗೆ ಬಿದ್ದಿದ್ದರು. ಈ ಬಗ್ಗೆ ಝಿಯಾದ್ ಬೈಕ್ ಸವಾರನಲ್ಲಿ ಪ್ರಶ್ನಿಸಿದ್ದು, ಈ ಸಂದರ್ಭದಲ್ಲಿ ಸವಾರ ಮತ್ತು ಸಹಸವಾರ ಝಿಯಾದ್ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಹಲ್ಲೆ ತಡೆಯಲು ಬಂದ ಇಜಾಝ್ ಅವರ ಮೇಲೆಯೂ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಪುತ್ತೂರು ನಗರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

ಗಡಿಪಿಲ : ರಿಕ್ಷಾ ಚಾಲಕ ಚೇತನ್‌ಗೆ ಹಲ್ಲೆ ,ಹ್ಯಾರಿಸ್ ಮತ್ತು ತಂಡದಿಂದ ಕೃತ್ಯ ಶಂಕೆ

Leave A Reply