ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ | ಗೋಲಿಬಾರ್ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರಲ್ಲ

Share the Article

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರಲ್ಲ ಎಂದು ಸರಕಾರ ಹೈಕೋರ್ಟ್ ಗೆ ತಿಳಿಸಿದೆ.

ಗೋಲಿಬಾರ್ ಘಟನೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಮಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಶುಕ್ರವಾರ ಈ ಮಾಹಿತಿ ನೀಡಿದೆ.

ಗೋಲಿಬಾರ್ ಘಟನೆ ಸಂಬಂದಿಸಿ ಮ್ಯಾಜಿಸ್ಟ್ರೇಟ್ ತನಿಖೆ ಮುಗಿದಿದ್ದು, ಪೊಲೀಸರು ಸೇರಿದಂತೆ ಯಾರೊಬ್ಬರು ತಪ್ಪಿತಸ್ಥರಲ್ಲ ಎಂದು ಮ್ಯಾಜಿಸ್ಟ್ರೇಟ್ ತನಿಖಾ ವರದಿ ಹೇಳಿದೆ. ಆ ವರದಿಯನ್ನು ಸರ್ಕಾರ ಪೂರ್ಣ ಪ್ರಮಾಣದಲ್ಲಿ ಒಪ್ಪಿಕೊಂಡಿದೆ ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್‌ಗೆ ತಿಳಿಸಿದರು.

Leave A Reply