ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್,ಸೈಕಲ್ ಸವಾರನ ಮೇಲೆ ಮಗುಚಿ ಬಿದ್ದು ಆತ ಸ್ಥಳದಲ್ಲೇ ಸಾವಿಗೀಡಾದ ಘಟನೆ ಬಾಗಲಕೋಟೆಯಲ್ಲಿ ಸಂಭವಿಸಿದೆ.
ಬಾಗಲಕೋಟೆ ಜಿಲ್ಲೆಯ ಗದ್ಯಾಳ ಗ್ರಾಮದಲ್ಲಿ ಇಂದು ಈ ಅಪಘಾತ ಸಂಭವಿಸಿದ್ದು,ಪರಿಣಾಮವಾಗಿ, ಜಮಖಂಡಿ ತಾಲೂಕಿನ ವಿಠಲ ಮಾಳಿ (45) ಸಾವಿಗೀಡಾಗಿದ್ದಾರೆ.ಈ ಅವಘಡದಲ್ಲಿ ಇನ್ನಿಬ್ಬರು ಗಾಯಗೊಂಡಿದ್ದಾರೆ.
ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ನಿಲುಗಡೆ ಮಾಡಿದ್ದ ಸಂದರ್ಭದಲ್ಲಿ ಅದನ್ನು ನ್ಯೂಟ್ರಲ್ ಗೇರ್ನಲ್ಲಿ ಇರಿಸಲಾಗಿತ್ತು. ಹೀಗಾಗಿ ಇದ್ದಕ್ಕಿದ್ದಂತೆ ಚಲಿಸಿದ ಟ್ರ್ಯಾಕ್ಟರ್ ಮಗುಚಿ ಬಿದ್ದು, ಒಬ್ಬನ ಸಾವು ಸಂಭವಿಸಿದೆ.
ಗಾಯಾಳುಗಳನ್ನು ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು,ಸಾವಳಗಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿ, ತಲೆ ಮರೆಸಿಕೊಂಡಿದ್ದು, ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.
You must log in to post a comment.