ದೀಪಾವಳಿಯಂದು ದೇವಸ್ಥಾನಗಳಲ್ಲಿ ಗೋಪೂಜೆ ಮಾಡಲು ಸರಕಾರ ಆದೇಶ

ದೀಪಾವಳಿ ಹಬ್ಬದಂದು ದೇವಸ್ಥಾನಗಳಲ್ಲಿ ಗೋಪೂಜೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ.

ನವೆಂಬರ್ 5ರ ಬಲಿಪಾಡ್ಯಮಿಯಂದು ಪೂಜೆ ಸಲ್ಲಿಸಲು ಆದೇಶ ನೀಡಲಾಗಿದೆ. ಸಂಜೆ 5.30 ರಿಂದ 6.30ರ ವೇಳೆಯಲ್ಲಿ ಪೂಜೆ ನಡೆಸಲು ಸೂಚನೆ ನೀಡಲಾಗಿದೆ.

ಬಲಿಪಾಡ್ಯಮಿ ದಿನದಂದು ಮುಜುರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಲು ಹಿಂದು ಧಾರ್ಮಿಕ ಧರ್ಮಾದಾಯ ದತ್ತಿಗಳ ಇಲಾಖೆಯಿಂದ ಆದೇಶ ಕೊಡಲಾಗಿದೆ.

ಬಲಿಪಾಡ್ಯಮಿ ದಿನ ಸಂಜೆ 5.30 ರಿಂದ 6.30ರ ಸಮಯದಲ್ಲಿ ರಾಜ್ಯದ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳನ್ನು ಸ್ನಾನ ಮಾಡಿಸಿ ದೇವಾಲಯದಲ್ಲಿ ಅರಿಶಿಣ, ಕುಂಕುಮ, ಹೂವುಗಳಿಂದ ಪೂಜಿಸಿ ಅಕ್ಕಿ, ಬೆಲ್ಲ, ಬಾಳೆಹಣ್ಣು ಮತ್ತು ಸಿಹಿ ತಿನಿಸಿಗಳ ಗೋಗ್ರಾಸಗಳನ್ನು ಹಸುಗಳಿಗೆ ನೀಡಿ ಆರಾಧಿಸಲು ಸೂಚನೆ ನೀಡಲಾಗಿದೆ.

Leave A Reply

Your email address will not be published.