ಶಿಕ್ಷಣ ವ್ಯವಸ್ಥೆಯ ಸುಧಾರಣೆಗಾಗಿ ನೇಣು ಬಿಗಿದುಕೊಂಡು ಪ್ರಾಣ ತ್ಯಾಗ ಮಾಡಿದ ಇಂಜಿನಿಯರಿಂಗ್ ವಿದ್ಯಾರ್ಥಿ!! ಆತನ ಸಾವಿಗೆ ನೇರ ಹೊಣೆಯಾಯಿತು ಬೊಮ್ಮಾಯಿ ಸರ್ಕಾರ
ಈಗಿನ ಶಿಕ್ಷಣ ವ್ಯವಸ್ಥೆ ಸರಿಯಿಲ್ಲ, ನಮ್ಮ ಶಿಕ್ಷಣ ವ್ಯವಸ್ಥೆಯು ಬದಲಾಗದೇ ಇದೇ ಮುಂದುವರಿದರೆ ವಿದ್ಯಾರ್ಥಿಗಳು ಸಾಧನೆ ಮಾಡಲು ಸಾಧ್ಯವಿಲ್ಲ. ಇದಕ್ಕೆಲ್ಲಾ ಕೊನೆಯಗಬೇಕಾದರೆ ಒಂದು ಬಲಿದಾನವಾಗಬೇಕು,ವ್ಯವಸ್ಥೆ ಸರಿಯಾಗಲು ನಾನೇ ಪ್ರಾಣ ನೀಡುತ್ತೇನೆ ಎಂದು ವೀಡಿಯೋ ಮಾಡಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಅರಸೀಕೆರೆ ಹಿರಿಯಾಳು ನಿವಾಸಿ ಹೇಮಂತ್ ಹಾಸನ ಖಾಸಗಿ ಕಾಲೇಜೊಂದರಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು ಇತ್ತೀಚಿನ ಶಿಕ್ಷಣ ವ್ಯವಸ್ಥೆ ಸರಿಯಿಲ್ಲ ಎಂದು ನೊಂದು ನೇಣಿಗೆ ಕೊರಳೊಡ್ಡಿರುವ ದುರ್ದೈವಿ.
ಸಾವಿಗೂ ಮುಂಚೆ ಮೊಬೈಲ್ ನಲ್ಲಿ ವೀಡಿಯೋ ಒಂದನ್ನು ರೆಕಾರ್ಡ್ ಮಾಡಿದ್ದು ಅದರಲ್ಲಿ ನನ್ನ ಸಾವಿಗೆ ಶಿಕ್ಷಣ ವ್ಯವಸ್ಥೆಯೇ ಕಾರಣ. ಶಿಕ್ಷಣ ವ್ಯವಸ್ಥೆ ಸರಿಯಾಗಲು ನಾನು ಪ್ರಾಣ ತ್ಯಾಗ ಮಾಡುತ್ತಿದ್ದೇನೆ, ನನ್ನ ಅಂತ್ಯ ಸಂಸ್ಕಾರಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ, ಶಿಕ್ಷಣ ಸಚಿವರು ಬರಬೇಕು, ನನ್ನ ಅಂಗಾಂಗಗಳನ್ನು ದಾನ ಮಾಡಬೇಕು ಹಾಗೂ ರಾಜ್ಯದ ಎಲ್ಲಾ ರಾಜಕಾರಣಿಗಳು ಶಿಕ್ಷಣ ವ್ಯವಸ್ಥೆಯ ಸುಧಾರಣೆಗೆ ಸಹಕಾರ ನೀಡಬೇಕು ಎಂದು ಹೇಳಿದ್ದಾನೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.