ಲಾರಿಯಲ್ಲಿ ಹೊತ್ತುಕೊಂಡು ಹೋಗುತ್ತಿದ್ದ
ಭತ್ತ ಪೈರು ಕಟಾವು ಯಂತ್ರ ವಿದ್ಯುತ್ ತಂತಿಗೆ ಸ್ಪರ್ಶ | ಅದೃಷ್ಟವಶಾತ್ ತಪ್ಪಿತು ಭಾರಿ ಅನಾಹುತ

ಕಡಬ : ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ಲಾರಿಯೊಂದರಲ್ಲಿ ಭತ್ತ ಪೈರು ಕಟಾವು ಯಂತ್ರವನ್ನು ಹೊತ್ತುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿಗೆ ಸ್ಪರ್ಶಿಸಿದ ಘಟನೆ ಬೆಳಂದೂರು ಗ್ರಾಮದ ಕೆಲೆಂಬಿರಿ ಎಂಬಲ್ಲಿ ಅ 26ರಂದು ಬೆಳಿಗ್ಗೆ ನಡೆದಿದೆ. ಘಟನೆಯಿಂದ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಭಾರಿ ಅನಾಹುತ ತಪ್ಪಿ ಹೋಗಿದೆ.
ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು, ಬೆಳಂದೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲೋಹಿತಾಕ್ಷ ಕೆಡೆಂಜಿಕಟ್ಟ ಭೇಟಿ ನೀಡಿದ್ದಾರೆ.

Leave A Reply

Your email address will not be published.