ನೆಲ್ಯಾಡಿ: ಬೈಕ್ ಹಾಗೂ ಕಾರಿನ ನಡುವೆ ಅಪಘಾತ | ಬೈಕ್ ಸವಾರ ಪೊಲೀಸ್ ಸಿಬ್ಬಂದಿಗೆ ಗಾಯ

ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಸಮೀಪದ ಲಾವತಡ್ಕ ಎಂಬಲ್ಲಿ ನಡೆದಿದೆ.

ಗಾಯಗೊಂಡಿರುವ ಬೈಕ್ ಸವಾರನನ್ನು ಮಂಗಳೂರಿನಲ್ಲಿ ಪೊಲೀಸ್ ಸಿಬ್ಬಂದಿಯಾಗಿರುವ ಸಿದ್ದಪ್ಪ ಎಂದು ಗುರುತಿಸಲಾಗಿದೆ .

ಇವರು ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ವೇಳೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ಘಟನೆ ನಡೆದಿದೆ.
ಗಾಯಾಳುವನ್ನು ಕೂಡಲೇ ಹಾಸನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

Leave A Reply

Your email address will not be published.