ಪಿಯುಸಿ ಮೇಲ್ಪಟ್ಟ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ!!ರಾಜ್ಯದ ಹಲವು ಜಿಲ್ಲೆಗಳಲ್ಲಿ ಗ್ರಾಮಲೆಕ್ಕಿಗ ಹುದ್ದೆಗೆ ನೇರ ಸಂದರ್ಶನ ಮೂಲಕ ನೇಮಕಾತಿ!!
ಪಿಯುಸಿ ಮೇಲ್ಪಟ್ಟ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶ. ರಾಜ್ಯದ ವಿವಿಧ ಜಿಲ್ಲೆಗಳ ಗ್ರಾಮ ಪಂಚಾಯತ್‌ಗಳಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗ (ವಿಲೇಜ್ ಅಕೌಂಟೆಂಟ್) ಹುದ್ದೆಗಳ ನೇಮಕಾತಿಗೆ ಸರ್ಕಾರ ಆದೇಶ ಹೊರಡಿಸಿದ್ದು, ನೇರ ನೇಮಕಾತಿ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ನಡೆಸಲಾಗುತ್ತದೆ.
ಉಡುಪಿ, ಹಾಸನ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ರಾಯಚೂರು, ದಾವಣಗೆರೆ ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಒಟ್ಟು 355 ಗ್ರಾಮ ಲೆಕ್ಕಿಗ ಹುದ್ದೆಗಳು ಖಾಲಿ ಇದ್ದು, ಈ ಬಾರಿ ಭರ್ತಿ ನಡೆಸಲು ನಿರ್ಧರಿಸಲಾಗಿದೆ.
ಈಗಾಗಲೇ ರಾಜ್ಯ ಸರ್ಕಾರವು ನೇಮಕಾತಿ ಪ್ರಕ್ರಿಯೆಯನ್ನು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ವಹಿಸಿದ್ದು ಶೀಘ್ರವೇ ನೇಮಕಾತಿಗೆ ಅದೇಶಿಸಿದೆ.
ಹುದ್ದೆಗಳು ಹಾಗೂ ಜಿಲ್ಲೆಗಳು: ಚಾಮರಾಜನಗರ- 40
ಬೆಂಗಳೂರು – 11
ಉಡುಪಿ – 18
ರಾಮನಗರ – 1
ಚಿತ್ರದುರ್ಗ – 59
ಶಿವಮೊಗ್ಗ -69
ಹಾಸನ -34
ಮಂಡ್ಯ – 54
ರಾಯಚೂರು – 51
ದಾವಣಗೆರೆ -18
ಮೇಲ್ಕಂಡ ಜಿಲ್ಲೆಗಳಲ್ಲಿ ಇರುವ ಹುದ್ದೆಗಳ ಭರ್ತಿಗೆ ನೇರ ಸಂದರ್ಶನದ ಮೂಲಕ ನೇಮಕಾತಿಗೆ ಕ್ರಮ ಕೈಗೊಳ್ಳುವಂತೆ ರಾಜ್ಯ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಾದ ಯದುಕುಮಾರ್ ಅವರು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ತಕ್ಷಣ ಆಯಾ ಜಿಲ್ಲೆಗಳ ಆಸಕ್ತ ಅಭ್ಯರ್ಥಿಗಳು ಜಿಲ್ಲಾಧಿಕಾರಿಯವರ ಸೂಚನಾ ಫಲಕದಲ್ಲಿ ಅಳವಡಿಸಲಾದ ಸರ್ಕಾರಿ ಸುತ್ತೋಲೆಯನ್ನು ವೀಕ್ಷಿಸಿ, ಅದರ ಪ್ರಕಾರ ಅರ್ಜಿ ಸಲ್ಲಿಸಿ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಕೋರಲಾಗಿದೆ.