ವಿಟ್ಲ : ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ | ಸಹಸವಾರೆ ಮಹಿಳೆ ಸಾವು

ಬಂಟ್ವಾಳ : ಕಲ್ಲಡ್ಕ – ಕಾಂಞಂಗಾಡು ಅಂತರಾಜ್ಯ ಹೆದ್ದಾರಿಯ ಕಾಶಿಮಠ ಅಪ್ಪರಿಪಾದ ಮಧ್ಯೆ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು, ಹಿಂಬದಿಯಲ್ಲಿದ್ದ ಮಹಿಳೆಗೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಫಲಕಾರಿಯಾಗದೆ ಮೃತ ಪಟ್ಟ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಲ್ಲಿನ ಪುಣಚ ಬೈಲುಗುತ್ತು ನಿವಾಸಿ ವನಿತಾ (50) ಎಂಬವರೇ ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.

ವನಿತಾ ಅವರು ತಮ್ಮ ಪುತ್ರನ ಜತೆಗೆ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗೀ ವಿಟ್ಲಕ್ಕೆ ಹೋಗುತ್ತಿದ್ದ ಸಂದರ್ಭ ಈ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿದ್ದು, ಘಟನೆ ನಡೆದಿದೆ.

Ad Widget

Ad Widget

Ad Widget

Ad Widget

Ad Widget

Ad Widget Ad Widget

Ad Widget

Ad Widget

Ad Widget

Ad Widget

ತಪ್ಪಿದ ಬೈಕ್ ಏಕಾಏಕಿ ರಸ್ತೆಯಲ್ಲಿ ಮಗುಚಿ ಬಿದ್ದಿದೆ. ಇದರಿಂದ ಮಹಿಳೆಯ ತಲೆಯ ಭಾಗಕ್ಕೆ ಪೆಟ್ಟಾಗಿದ್ದು, ತಕ್ಷಣವೇ ಅವರನ್ನು ಅಟೋ ರಿಕ್ಷಾ ಮೂಲಕ ವಿಟ್ಲ ಆಸ್ಪತ್ರೆಗೆ ದಾಖಲಿಸಲಾಯಿತು. ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಬಳಿಕ ಇನ್ನಷ್ಟು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗೀ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟರು.

Leave a Reply

error: Content is protected !!
Scroll to Top
%d bloggers like this: