ಮೂಡುಬಿದಿರೆ:ವಿದ್ಯಾರ್ಥಿ ತಂಡಗಳ ನಡುವೆ ಮಾರಾಮಾರಿ!! ನಾಲ್ವರು ವಿದ್ಯಾರ್ಥಿಗಳಿಗೆ ಗಾಯ, ಆಸ್ಪತ್ರೆಗೆ ದಾಖಲು

ಕಾಲೇಜು ವಿದ್ಯಾರ್ಥಿ ತಂಡಗಳ ಮಧ್ಯೆ ಹೊಡೆದಾಟ ನಡೆದು ನಾಲ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮೂಡುಬಿದಿರೆಯ ತೋಡಾರು ಎಂಬಲ್ಲಿ ಇಂದು ಸಂಜೆ ನಡೆದಿದೆ.

40 ಜನ ವಿದ್ಯಾರ್ಥಿಗಳ ತಂಡ ಮತ್ತೊಂದು ತಂಡದ ಮೇಲೆ ಏಕಾಏಕಿ ದಾಳಿ ನಡೆಸಿದ್ದು,ಇದರ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ.

ಸದ್ಯ ಗಾಯಗೊಂಡ ವಿದ್ಯಾರ್ಥಿಗಳು ಚಿಕಿತ್ಸೆಗಾಗಿ ಮೂಡಬಿದಿರೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.ಜಗಳಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

Leave A Reply

Your email address will not be published.