ಪುತ್ತೂರು : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮೊಳಗಿತು ಕನ್ನಡದ ಶ್ರೇಷ್ಠತೆ ಸಾರುವ ಹಾಡುಗಳು

Share the Article

ಪುತ್ತೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ‘ಕನ್ನಡಕ್ಕಾಗಿ ನಾವು’ ಅಭಿಯಾನದ ಅಂಗವಾಗಿ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕನ್ನಡದ ಶ್ರೇಷ್ಟತೆಯನ್ನು ಸಾರುವ ಹಾಡುಗಳನ್ನು ಹಾಡಲಾಯಿತು.

ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಅ.28 ರಂದು ಬೆಳಗ್ಗೆ 11 ಗಂಟೆಗೆ ಕನ್ನಡದ ಶ್ರೇಷ್ಠತೆಯನ್ನು ಸಾರುವ ‘ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಈ ಕನ್ನಡ ಗೀತೆಗಳನ್ನು ಹಾಡಿದರು.

ಈ ಸಂದರ್ಭದಲ್ಲಿ ಬಸ್ ನಿಲ್ದಾಣದಲ್ಲಿದ್ದ ಪ್ರಯಾಣಿಕರು ಎದ್ದು ನಿಂತು ಗೌರವ ಸಲ್ಲಿಸಿ,ತಾವೂ ಜತೆಯಲ್ಲಿ ಹಾಡು ಹಾಡಿದರು‌.

Leave A Reply