ಸವಣೂರು : ಗ್ರಾ.ಪಂ.ನಲ್ಲಿ ಮೊಳಗಿತು ಕನ್ನಡದ ಶ್ರೇಷ್ಠತೆ ಸಾರುವ ಹಾಡುಗಳು
ಸವಣೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ‘ಕನ್ನಡಕ್ಕಾಗಿ ನಾವು’ ಅಭಿಯಾನದ ಅಂಗವಾಗಿ ಸವಣೂರು ಗ್ರಾ.ಪಂ.ಸಾಮಾನ್ಯ ಸಭೆಯಲ್ಲಿ ಕನ್ನಡದ ಶ್ರೇಷ್ಟತೆಯನ್ನು ಸಾರುವ ಹಾಡುಗಳನ್ನು ಹಾಡಲಾಯಿತು.
ಅ.28 ರಂದು ಬೆಳಗ್ಗೆ 11 ಗಂಟೆಗೆ ಕನ್ನಡದ ಶ್ರೇಷ್ಠತೆಯನ್ನು ಸಾರುವ ‘ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಈ ಕನ್ನಡ ಗೀತೆಗಳನ್ನು ಗ್ರಾ.ಪಂ.ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಅಧಿಕಾರಿಗಳು ಸಿಬಂದಿಗಳು ಹಾಡಿದರು.