Day: October 29, 2021

ಪುನೀತ್ ರಾಜಕುಮಾರ್ ಅವರ ನಿಧನದಿಂದ ಮನನೊಂದು ಅಭಿಮಾನಿ ಆತ್ಮಹತ್ಯೆ

ನಟ ಪುನೀತ್ ರಾಜಕುಮಾರ್ ರವರ ನಿಧನದ ಸುದ್ದಿ ಕೇಳಿ ಅವರ ಅಪ್ಪಟ ಅಭಿಮಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಪೇಟೆ ತಾಲೂಕು ಬಂಡಿಗೇರಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕು ಬಂಡಿಗೇರಿ ಗ್ರಾಮದ ಸಾದ್ದಪ್ಪ(40) ಎಂಬವನೇ ಪುನೀತ್ ರಾಜಕುಮಾರ್ ನಿಧನದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪುನೀತ್ ರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿಯಾದ ಸಾದ್ದಪ್ಪ ಪುನೀತ್ ರವರ ನಿಧನದಿಂದ ಮನನೊಂದು ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೋಲಿಸ್ ವಸತಿಗೃಹದ ಸಮೀಪದ ಕಾಲುವೆಗೆ ಹಾರಿ ತಮ್ಮ ಜೀವವನ್ನು …

ಪುನೀತ್ ರಾಜಕುಮಾರ್ ಅವರ ನಿಧನದಿಂದ ಮನನೊಂದು ಅಭಿಮಾನಿ ಆತ್ಮಹತ್ಯೆ Read More »

ಕಡಬ : ಮರ್ದಾಳ ಗ್ರಾ.ಪಂ.ನಲ್ಲಿ ಸದಸ್ಯರ ಗಮನಕ್ಕೆ ಬಾರದೆ ಕ್ರಿಯಾ ಯೋಜನೆ ತಯಾರಿ ಆರೋಪ ,ಧರಣಿ ಕುಳಿತ ಮೂವರು ಸದಸ್ಯರು

ಕಡಬ : ಸದಸ್ಯರ ಗಮನಕ್ಕೆ ತಾರದೆ ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದ್ದು, ಈ ಬಗ್ಗೆ ಅಧ್ಯಕ್ಷರು ಹಾಗೂ ಪಿಡಿಒ ಅವರನ್ನು ಪ್ರಶ್ನಿಸಿದಾಗ ಉಡಾಫೆಯಿಂದ ಉತ್ತರ ನೀಡಿದ್ದಾರೆ ಎಂದು ಆರೋಪಿಸಿ ಮರ್ಧಾಳ ಗ್ರಾಮ ಪಂಚಾಯತ್ ನ ಮೂವರು ಸದಸ್ಯರು ಪಂಚಾಯತ್ ಒಳಗಡೆ ಧರಣಿ ಕುಳಿತಿದ್ದಾರೆ. 102 ನೆಕ್ಕಿಲಾಡಿ ಗ್ರಾಮದ ಒಂದನೇ ವಾರ್ಡ್ ಸದಸ್ಯರಾದ ಶಾಕೀರ್, ಮೀನಾಕ್ಷಿ ಹಾಗೂ ಅಜಯ್ ಕುಮಾರ್ ಅವರು ಇಂದು ಅಪರಾಹ್ನದಿಂದ ಪಂಚಾಯತ್ ಒಳಗೆ ಪ್ರತಿಭಟನೆ ಕುಳಿತಿದ್ದು, ಪಂಚಾಯತ್ ಕಛೇರಿಗೆ ಬೀಗ ಹಾಕಲು ಬಿಡದೆ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. …

ಕಡಬ : ಮರ್ದಾಳ ಗ್ರಾ.ಪಂ.ನಲ್ಲಿ ಸದಸ್ಯರ ಗಮನಕ್ಕೆ ಬಾರದೆ ಕ್ರಿಯಾ ಯೋಜನೆ ತಯಾರಿ ಆರೋಪ ,ಧರಣಿ ಕುಳಿತ ಮೂವರು ಸದಸ್ಯರು Read More »

ಕಡಬ : ಕೌಟುಂಬಿಕ ಕಲಹ | ದಾರಿ ಮಧ್ಯೆಯೇ ಪತ್ನಿ,ಮಕ್ಕಳನ್ನು ಕಾರಿನಿಂದ ಇಳಿಸಿ ಹೋದ ಪತಿರಾಯ

ಕಡಬ : ಕಾರಿನಲ್ಲಿ ತೆರಳುತ್ತಿದ್ದ ವೇಳೆ ವ್ಯಕ್ತಿಯೋರ್ವರು ತನ್ನ ಹೆಂಡತಿ ಹಾಗೂ ಮಗಳನ್ನು ದಾರಿ ಮಧ್ಯೆಯೇ ಬಿಟ್ಟು ಹೋದ ಘಟನೆ ನಡೆದಿದೆ. ಕಡಬ ತಾಲೂಕಿನ ಸಿರಿಬಾಗಿಲು ನಿವಾಸಿ 9 ವರ್ಷಗಳ ಹಿಂದೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಇದರ ಪೈಕಿ ಓರ್ವ ಮಗ ಬುದ್ಧಿ ಮಾಂದ್ಯನಾಗಿದ್ದು, ಮದುವೆಯಾದ ಬಳಿಕ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದು, ಇದರ ಕುರಿತು ಈ ಮೊದಲು ಪತ್ನಿ ಪುತ್ತೂರು ಮಹಿಳಾ ಠಾಣೆ ಮತ್ತು ಮಹಿಳಾ ಸಾಂತ್ವನ ಕೇಂದ್ರಕ್ಕೆ ದೂರು ನೀಡಿದ್ದರು. ಪತಿ-ಪತ್ನಿ …

ಕಡಬ : ಕೌಟುಂಬಿಕ ಕಲಹ | ದಾರಿ ಮಧ್ಯೆಯೇ ಪತ್ನಿ,ಮಕ್ಕಳನ್ನು ಕಾರಿನಿಂದ ಇಳಿಸಿ ಹೋದ ಪತಿರಾಯ Read More »

ಪುನೀತ್ ರಾಜ್ ಕುಮಾರ್ ನಿಧನ | ಅಭಿಮಾನಿ ಹೃದಯಾಘಾತದಿಂದ ಸಾವು

ನಟ ಪುನೀತ್ ರಾಜ್‍ಕುಮಾರ್ ನಿಧನದ ಸುದ್ದಿ ಕೇಳಿ ಅಭಿಮಾನಿಯೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮರೂರು ಗ್ರಾಮದಲ್ಲಿ ಶುಕ್ರವಾರ ಜರುಗಿದೆ. ತಾಲೂಕಿನ ಪೊನ್ನಾಚಿ ಸಮೀಪದ ಮರೂರು ಗ್ರಾಮದ ಮುನಿಯಪ್ಪ (30) ಎಂಬಾತನೇ ಮೃತ ದುರ್ದೈವಿಯಾಗಿದ್ದು, ಈತ ಬಾಲ್ಯದಿಂದಲೂ ಪುನೀತ್ ರಾಜ್‍ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದನು. ಪುನೀತ್ ರಾಜ್ ಕುಮಾರ್ ಅವರ ಎಲ್ಲಾ ಚಿತ್ರಗಳನ್ನು ವೀಕ್ಷಿಸುತ್ತಿದ್ದನು. ಇಂದು ಮಧ್ಯಾಹ್ನ 3 ಗಂಟೆ ಸುಮಾರಿನಲ್ಲಿ ಪುನೀತ್ ರಾಜ್‍ಕುಮಾರ್ ನಿಧನದ ಸುದ್ದಿ ತಿಳಿದು ಸ್ಥಳದಲ್ಲಿಯೇ ಕುಸಿದುಬಿದ್ದಿದ್ದಾನೆ. ಕೂಡಲೇ …

ಪುನೀತ್ ರಾಜ್ ಕುಮಾರ್ ನಿಧನ | ಅಭಿಮಾನಿ ಹೃದಯಾಘಾತದಿಂದ ಸಾವು Read More »

ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ಸರಕಾರಿ ಪ್ರೇರಿತ ದಾಳಿಯನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಪುತ್ತೂರಿನಲ್ಲಿ ಪ್ರತಿಭಟನೆ

ಪುತ್ತೂರು: ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ಸರಕಾರಿ ಪ್ರೇರಿತ ದಾಳಿಯನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಪುತ್ತೂರು ಮಿನಿ ವಿಧಾನ ಸೌಧ ಮುಂಭಾಗದಲ್ಲಿ ನಡೆಯಿತು. ಪಾಪ್ಯುಲರ್ ಫ್ರಂಟ್ ಪುತ್ತೂರು ಜಿಲ್ಲಾಧ್ಯಕ್ಷರಾದ ಜಾಬೀರ್ ಅರಿಯಡ್ಕ ರವರು ಮಾತನಾಡಿ ಬಾಂಗ್ಲಾ ದೇಶದ ಘಟನೆಯನ್ನು ನೆಪವಾಗಿಟ್ಟುಕೊಂಡು ತ್ರಿಪುರ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಮುಸ್ಲಿಮರ ವಿರುದ್ಧ ವಾಗಿ ಸಂಘಪರಿವಾರದ ಹಿಂಸಾತ್ಮಕ ಕೃತ್ಯಗಳು ಮರುಕಳಿಸುತ್ತಿದ್ದು, ರಾಜ್ಯದಲ್ಲಿಯೂ ತ್ರಿಶೂಲ ಧೀಕ್ಷೆ ನೀಡುವ ಮುಖಾಂತರ ಹಿಂಸಾಚಾರಕ್ಕೆ ಚಾಲನೆ ನೀಡಲಾಗಿದೆ. ಇಲ್ಲಿಯೂ ಅಂತಹ ಘಟನೆಗಳು ಮುಂದುವರಿದರೆ …

ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ಸರಕಾರಿ ಪ್ರೇರಿತ ದಾಳಿಯನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಪುತ್ತೂರಿನಲ್ಲಿ ಪ್ರತಿಭಟನೆ Read More »

ನಾಳೆ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ

ಬೆಂಗಳೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಈ ಕುರಿತು ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಪ್ರಕಟಣೆ ಹೊರಡಿಸಿದ್ದು, ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣ ಹಿನ್ನೆಲೆಯಲ್ಲಿ ಶೋಕಾಚರಣೆ ನಿಮಿತ್ತ ಖಾಸಗಿ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದೆ.ಆದರೆ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸುವ ಕುರಿತು ಇನ್ನೂ ಯಾವುದೇ ನಿರ್ಧಾರವಾಗಿಲ್ಲ.ಇನ್ನು ನಾಳೆ ನಡೆಯಬೇಕಿದ್ದ ಎಂಬಿಎ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ನಟ ಪುನೀತ್ ರಾಜ್ …

ನಾಳೆ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ Read More »

ಬೆಳ್ತಂಗಡಿ : ಪತ್ನಿಗೆ ವಂಚಿಸಿ ಎರಡನೇ ಮದುವೆಯಾದ ಸರ್ವೆ ಇಲಾಖೆಯ ನೌಕರ , ಗಂಡನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ

ಪತಿ ಮತ್ತು ಆತನ ತಾಯಿ ಮಾನಸಿಕವಾಗಿ ಹಿಂಸೆ ನೀಡಿದಲ್ಲದೆ, ತನ್ನನ್ನು ವಂಚಿಸಿ ಎರಡನೇ ಮದುವೆಯಾಗಿದ್ದಾನೆ ಎಂದು ಆರೋಪಿಸಿ ಪತಿಯ ವಿರುದ್ಧ ಪತ್ನಿ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಂತಬೆಟ್ಟು ಗ್ರಾಮದಲ್ಲಿ ನಡೆದಿದೆ. ಕರೀಮಣೆಲು ಗ್ರಾಮದ ಗಾಂಧಿನಗರದ ದೀಕ್ಷಾ(24) ಎಂಬವರು ಮೇಲಂತಬೆಟ್ಟು ಗ್ರಾಮದ ಮಾತೃಶ್ರೀ ನಿವಾಸಿ ಬೆಳ್ತಂಗಡಿ ಸರ್ವೆ ಇಲಾಖೆಯ ದಿನಕೂಲಿ ನೌಕರ ಚೇತನ್ ಎಂಬಾತನ ವಿರುದ್ಧ ದೂರು ನೀಡಿದ್ದಾರೆ. ಚೇತನ್ ಎಂಬುವರನ್ನು ಹಿಂದೂ ಧರ್ಮದ ಸಂಪ್ರದಾಯದಂತೆ ಮದುವೆಯಾಗಿ ಸುಮಾರು 4 …

ಬೆಳ್ತಂಗಡಿ : ಪತ್ನಿಗೆ ವಂಚಿಸಿ ಎರಡನೇ ಮದುವೆಯಾದ ಸರ್ವೆ ಇಲಾಖೆಯ ನೌಕರ , ಗಂಡನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ Read More »

ಭಾನುವಾರದವರೆಗೆ ಮದ್ಯ ಮಾರಾಟ ಸಂಪೂರ್ಣ ನಿಷೇಧ, ಅಘೋಷಿತ ಬಂದ್ ಸ್ಥಿತಿ ನಿರ್ಮಾಣ

ಬೆಂಗಳೂರು : ಇಡೀ ಕರ್ನಾಟಕ ಇವತ್ತು ತಲ್ಲಣ. ಇಂದು ಅ.29 ರ ಶುಕ್ರವಾರ ಮಧ್ಯಾಹ್ನ ‌ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ. ಪುನೀತ್ ಅವರ ನಿಧನ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಲ್ಲಿ ಇಂದು ಸಂಜೆಯಿಂದ ಭಾನುವಾರದವರೆಗೆ ಬಾರ್ ಹಾಗೂ ಮದ್ಯದಂಗಡಿಗಳನ್ನು ಮುಚ್ಚಲು ಬಿಬಿಎಂಪಿ ಸೂಚಿಸಿದೆ. ಈ ಮಧ್ಯೆ, ಉನ್ನತ ವ್ಯಾಸಾಂಗಕ್ಕಾಗಿ ಅಮೇರಿಕಾದಲ್ಲಿರುವ ಪುನೀತ್ ಅವರ ಮಗಳು ದೃತಿ ಅಮೆರಿಕದಿಂದ ಮರಳುತ್ತಿದ್ದು, ಶನಿವಾರ ಬೆಂಗಳೂರು ತಲುಪುವ ಸಾಧ್ಯತೆಯಿದೆ ಎಂದು …

ಭಾನುವಾರದವರೆಗೆ ಮದ್ಯ ಮಾರಾಟ ಸಂಪೂರ್ಣ ನಿಷೇಧ, ಅಘೋಷಿತ ಬಂದ್ ಸ್ಥಿತಿ ನಿರ್ಮಾಣ Read More »

ತಮಿಳಿನ ಖ್ಯಾತ ನಟ ರಜನಿಕಾಂತ್ ಆಸ್ಪತ್ರೆಗೆ ದಾಖಲು!!ಆಸ್ಪತ್ರೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್

ಚೆನೈ: ತಮಿಳಿನ ಖ್ಯಾತ ನಟ ತಲೈವಾ ರಜನಿಕಾಂತ್ ಅವರು ಇಂದು ಚೆನೈ ನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದು,ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ದಿನನಿತ್ಯದ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದಾರೆ ಎಂದು ತಿಳಿದುಬಂದಿದೆ. ವೈದ್ಯಕೀಯ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದ್ದು, ಸದ್ಯದಲ್ಲೇ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಆಸ್ಪತೆಯ ಮುಂದೆ ಇಬ್ಬರು ಪೊಲೀಸ್ ಸಬ್ ಇನ್ಸೆಕ್ಟರ್‌ಗಳು ಮತ್ತು ನಾಲ್ವರು ಮಹಿಳಾ ಕಾನ್‌ಸ್ಟೆಬಲ್‌ಗಳು ತಮ್ಮ ರುಜುವಾತುಗಳನ್ನು ಪರಿಶೀಲಿಸಿದ ನಂತರ ಜನರನ್ನು …

ತಮಿಳಿನ ಖ್ಯಾತ ನಟ ರಜನಿಕಾಂತ್ ಆಸ್ಪತ್ರೆಗೆ ದಾಖಲು!!ಆಸ್ಪತ್ರೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ Read More »

ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ | ಕಾರ್ಕಳದ ನಾಲ್ವರ ದುರ್ಮರಣ ,ಐವರಿಗೆ ಗಂಭೀರ ಗಾಯ

ಕಾರ್ಕಳ : ಶಿವಮೊಗ್ಗದಿಂದ ಹೆಬ್ರಿ ಕಡೆಗೆ ಬರುತ್ತಿದ್ದ ಈಚರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಆಗುಂಬೆ ಘಾಟಿಯ 5ನೇ ತಿರುವಿನ ರಸ್ತೆ ತಡೆಗೋಡೆ ಬಡಿದು ಸುಮಾರು ನೂರು ಅಡಿ ಆಳದ ಕಂದಕಕ್ಕೆ ಬಿದ್ದು,ಕಾರ್ಕಳದ ನಾಲ್ವರು ಮೃತಪಟ್ಟು,ಐವರು ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ. ಲಾರಿಯಲ್ಲಿ ಚಾಲಕ ಸಹಿತ ಒಟ್ಟು 9ಜನ ಇದ್ದರೆಂದು ತಿಳಿದುಬಂದಿದೆ. 4 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಉಳಿದ ಐವರಿಗೆ ಗಂಭೀರ ಗಾಯಗೊಂಡಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹೆಬ್ರಿ ಪೊಲೀಸರು ಆಗಮಿಸಿದ್ದು. ಅಗ್ನಿಶಾಮಕ ದಳದ …

ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ | ಕಾರ್ಕಳದ ನಾಲ್ವರ ದುರ್ಮರಣ ,ಐವರಿಗೆ ಗಂಭೀರ ಗಾಯ Read More »

error: Content is protected !!
Scroll to Top