ಸುಬ್ರಹ್ಮಣ್ಯ : ಕೆಎಸ್ಎಸ್.ಕಾಲೇಜಿನಲ್ಲಿ ಕನ್ನಡ ಗೀತ ಗಾಯನ
ಕಡಬ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರ ವತಿಯಿಂದ ಮಾತಾಡ್ ಮಾತಾಡ್ ಕನ್ನಡ ಅಭಿಯಾನದ ಅಂಗವಾಗಿ ಏಕಕಾಲದಲ್ಲಿ ಗೀತ ಗಾಯನ ಕಾರ್ಯಕ್ರಮವನ್ನು ವಿಶ್ವದಾದ್ಯಂತ ಆಚರಿಸಲು ಸೂಚಿಸಲಾಗಿತ್ತು.
ಅದರಂತೆ ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನಲ್ಲಿ ಗೀತ ಗಾಯನ ಕಾರ್ಯಕ್ರಮವನ್ನು ನಡೆಸಲಾಯಿತು. ಕಾಲೇಜಿನ ವಿದ್ಯಾರ್ಥಿಗಳು ಬೋಧಕ ಬೋಧಕೇತರ ವರ್ಗದವರು ಗೀತಗಾಯನ ಮಾಡುವ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾರ್ಯಕ್ರಮವನ್ನು ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಕನ್ನಡ ವಿಭಾಗದ ಆಶ್ರಯದಲ್ಲಿ ನಡೆಸಲಾಯಿತು. ಕಾಲೇಜಿನ ಪ್ರಾಚಾರ್ಯರಾದ ಡಾ.ಗೋವಿಂದ ಎನ್ ಎಸ್. ಅಧ್ಯಕ್ಷತೆ ವಹಿಸಿದ್ದರು.
ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಉದಯಕುಮಾರ್ ಕಾರ್ಯಕ್ರಮ ದ ಉದ್ದೇಶದ ಕುರಿತು ಪ್ರಸ್ತಾವನೆಗೈದರು. ಕನ್ನಡ ವಿಭಾಗದ ಉಪನ್ಯಾಸಕಿ ಶ್ರೀಮತಿ ಸುಮಿತ್ರ ಕುಮಾರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಕನ್ನಡ ಭಾಷೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ವಿದ್ಯಾರ್ಥಿನಿ ಕುಮಾರಿ ಸಿಂಧೂರ ಪ್ರತಿಜ್ಞೆ ವಿಧಿ ಬೋಧಿಸಿದರು. ಕುವೆಂಪು ರಚಿಸಿರುವ” ಬಾರಿಸು ಕನ್ನಡ ಡಿಂಡಿಮ “ಕೆ ಎಸ್ ನಿಸಾರ್ ಅಹಮದ್ ರಚಿಸಿರುವ “ನಿತ್ಯೋತ್ಸವ “ಹಂಸಲೇಖ ರಚಿಸಿರುವ “ಹುಟ್ಟಿದರೆ ಕನ್ನಡ ನಾಡಲಿ ಹುಟ್ಟಬೇಕು ” ಗೀತೆಗಳನ್ನು ವಿದ್ಯಾರ್ಥಿನಿಯರಾದ ಕುಮಾರಿ ಸಂಧ್ಯಾ ಮತ್ತು ಕುಮಾರಿ ಸೌಜನ್ಯ ಇವರ ನೇತೃತ್ವದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲರೂ ಗಾಯನ ಮಾಡಿದರು.ಕುಮಾರಿ ಜಯಶ್ರೀ ವಂದನಾರ್ಪನೆಗೈದರು.