ಬಂಟ್ವಾಳ : ಜಿಲ್ಲಾ ಮಟ್ಟದ ಸಾಲ ಸಂಪರ್ಕ, ವಿವಿಧ ಯೋಜನೆಗಳ ಮಾಹಿತಿ ಕಾರ್ಯಗಾರಕ್ಕೆ ಚಾಲನೆ

ಬಂಟ್ವಾಳ : ಇಲ್ಲಿನ ಬಂಟರ ಭವನದಲ್ಲಿ ಅ. 30ರಂದು
ಜಿಲ್ಲೆಯ ರಾಷ್ಟ್ರೀಕೃತ, ಖಾಸಗಿ, ಸ್ಥಳೀಯ ಬ್ಯಾಂಕ್‍ಗಳು, ನರ್ಬಾರ್ಡ್ ಮತ್ತು ವಿವಿಧ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಸಾಲ ಸಂಪರ್ಕ ಕಾರ್ಯಕ್ರಮ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಗಾರವನ್ನು ಕೇಂದ್ರ ಸರ್ಕಾರದ ನವೀನ, ನವೀಕರಿಸಬಹುದಾದ ಇಂಧನ, ರಸಾಯನಿಕ ಹಾಗೂ ರಸಗೊಬ್ಬರಗಳ ಖಾತೆಯ ರಾಜ್ಯ ಸಚಿವ ಭಗವಂತ  ಖೂಬಾ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಂಸದರಾದ ನಳಿನ್ ಕುಮಾರ್ ಕಟೀಲ್, ಹಿಂದುಳಿದ ವರ್ಗಗಳ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ರಾಜೇಶ್ ನಾಯ್ಕ, ಡಾ. ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ಹರೀಶ್ ಪೂಂಜಾ, ಎಂಎಲ್ಸಿ ಪ್ರತಾಪ್ ಚಂದ್ರ ನಾಯಕ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು,ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾ ನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ವಿವಿಧ ಗಣ್ಯರು, ಜನಪ್ರತಿನಿಧಿಗಳು ವೇದಿಕೆಯಲ್ಲಿದ್ದರು.

ವಿವಿಧ ಯೋಜನೆಗಳ ಫಲಾನುಭವಿಗಳು, ಬ್ಯಾಂಕುಗಳ ಗ್ರಾಹಕರು ಉಪಸ್ಥಿತರಿದ್ದರು.

Ad Widget

Ad Widget

Ad Widget

Ad Widget

Ad Widget

Ad Widget Ad Widget

Ad Widget

Ad Widget

Leave a Reply

error: Content is protected !!
Scroll to Top
%d bloggers like this: