ಪೆರ್ಲ :ಕಾಲೇಜು ವಿದ್ಯಾರ್ಥಿನಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ!!ಮೃತ ಯುವತಿ ವಿಟ್ಲ ಕಾಲೇಜೊಂದರ ಅಂತಿಮ ಪದವಿ ವಿದ್ಯಾರ್ಥಿನಿ

ಪೆರ್ಲ: ಕಾಲೇಜು ವಿದ್ಯಾರ್ಥಿನಿಯೋರ್ವಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ನಡೆದಿದೆ.

ಮೃತ ಯುವತಿಯನ್ನು ಪೆರ್ಲ ಸಮೀಪದ ಬಜಕೂಡ್ಲು ನಿವಾಸಿ ಮಹಾಲಿಂಗ ನಾಯ್ಕ – ಕುಮುದಾಕ್ಷಿ ದಂಪತಿಗಳ ಪುತ್ರಿ ಶ್ರಾವ್ಯ (20) ಎಂದು ಗುರುತಿಸಲಾಗಿದೆ. ಈಕೆ ವಿಟ್ಲದ ಪದವಿ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು.

ಶ್ರಾವ್ಯ. ಅ.29 ರಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ತಂದೆ-ತಾಯಿ ಮಧ್ಯಾಹ್ನ ತೋಟದ ಕೆಲಸ ಮುಗಿಸಿ ವಾಪಸ್ಸು ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಈ ಘಟನೆ ಬಗ್ಗೆ ಬದಿಯಡ್ಕ ಪೋಲಿಸರು ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Leave A Reply

Your email address will not be published.