ದೀಪಾವಳಿಯಂದು ಹಸಿರು ಪಟಾಕಿ ಸಿಡಿಸೋದಕ್ಕೆ ಹಸಿರು ನಿಶಾನೆ | ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು:ಮನ-ಮನೆ ಬೆಳಗುವಂತಹ ದೀಪಗಳ ಹಬ್ಬ ಆಚರಿಸುವುದು ಪ್ರತಿಯೊಬ್ಬರಿಗೂ ಕನಸೇ ಸರಿ.ಇದೀಗ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿಕೊಂಡು ಹಸಿರು ಪಟಾಕಿ ಮಾತ್ರ ಹಚ್ಚುವುದರೊಂದಿಗೆ ದೀಪಾವಳಿ ಹಬ್ಬ ಆಚರಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಸುತ್ತೋಲೆ ಹೊರಡಿಸಿದ್ದು, ರಾಜ್ಯಾದ್ಯಂತ ನವೆಂಬರ್ ಮಾಹೆಯಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಲಿದ್ದು, ರಾಜ್ಯದ ಜನತೆಯ ಹಿತದೃಷ್ಠಿಯಿಂದ ಮತ್ತು ಕೋವಿಡ್-19 ಸೋಂಕು ಪ್ರಸರಣೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ದೀಪಾವಳಿ ಹಬ್ಬದ ಆಚರಣೆಯನ್ನು ಸರಳ ಹಾಗೂ ಭಕ್ತಿಪೂರ್ವಕವಾಗಿ ಆಚರಿಸಲು ನಿರ್ಧರಿಸಲಾಗಿದೆ.

ದೀಪಾವಳಿ ಹಬ್ಬವನ್ನು ವಿಪತ್ತು ನಿರ್ವಣಾ ಅಧಿನಿಯಮ 2005ರ ಅಡಿಯಲ್ಲಿ ದೀಪಾವಳಿ ಆಚರಣೆಗೆ ಈ ಕೆಳಕಂಡ ಮಾರ್ಗಸೂಚಿ ಕ್ರಮಗಳನ್ನು ಪಾಲಿಸಿ, ಆಚರಿಸುವಂತೆ ಆದೇಶದಲ್ಲಿ ಖಡಕ್ ಸೂಚನೆ ನೀಡಿದ್ದಾರೆ.

*ಸರ್ವೋಚ್ಛನ್ಯಾಯಾಲಯದ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರ ಪಟಾಕಿಗಳನ್ನು ಮಾರಾಟ ಮಾಡತಕ್ಕದ್ದಲ್ಲ ಮತ್ತು ಹಚ್ಚತಕ್ಕದ್ದಲ್ಲ.
*ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿಯನ್ನು ಪಡೆದ ಮಾರಾಟಗಾರರು ಹಸಿರು ಪಟಾಕಿಯನ್ನು ಮಾತ್ರ ಮಾರಾಟ ಮಾಡತಕ್ಕದ್ದು.
*ಹಸಿರು ಪಟಾಕಿ ಮಾರಾಟದ ಮಳಿಗೆಗಳನ್ನು ದಿನಾಂಕ 01-11-2021ರಿಂದ 10-11-2021ರವರೆಗೆ ಮಾತ್ರ ತೆರೆದಿರತಕ್ಕದ್ದು.
*ನಿಗದಿ ಪಡಿದ ಸ್ಥಳದಲ್ಲಿ ಮಾತ್ರ ಪಟಾಕಿ ಅಂಗಡಿ ತೆರೆಯುವುದು ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಪಟಾಕಿ ಮಳಿಗೆಗಳನ್ನು ಸ್ಥಾಪಿಸುವುದು.
*ಒಂದು ಮಳಿಗೆಯಿಂದ ಮತ್ತೊಂದು ಮಳಿಗೆಗೆ 6 ಮೀಟರ್ ಅಂತರವಿರಬೇಕು.
*ಪರವಾನಿಗೆ ಪತ್ರ ಸಾರ್ವಜನಿಕರಿಗೆ ಪ್ರದರ್ಶಿಸುವಂತೆ ಹಾಕಬೇಕು.
*ಹಸಿರು ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತಾಮುತ್ತ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು.
*ಪಟಾಕಿಗಳ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸುವುದು.

  • ಪಟಾಕಿ ಖರೀದಿಸುವವರು ಕನಿಷ್ಠ 6 ಮೀಟರ್ ಸಾಮಾಜಿಕ ಅಂತರ ಕಾಪಾಡುವುದು.
    *ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು ಧರಿಸತಕ್ಕದ್ದು
    *ಹಸಿರು ಪಟಾಕಿ ಖರೀದಿಯ ಸಂದರ್ಭದಲ್ಲಿ ಯಾವುದೇ ರೀತಿಯ ಜನದಟ್ಟಣೆಯಾಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳುವುದು.

ಈ ನಿಯಮ ಪಾಲಿಸದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ, ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗುಸಲಾಗುವುದ ಎಂದು ತಿಳಿಸಿದ್ದಾರೆ.

Leave A Reply

Your email address will not be published.