ಅಪ್ಪು ನಿಧನದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ | ಜಿಮ್ ಗಳಲ್ಲಿ ಈ ಹೊಸ ನಿಯಮ ಕಡ್ಡಾಯ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇನ್ನು ನೆನಪು ಮಾತ್ರ. ಅಮ್ಮನ ಮಡಿಲು ಸೇರಿರುವ ಅಪ್ಪು ಚಿರನಿದ್ರೆಗೆ ಜಾರಿದ್ದಾರೆ. ಸ್ಯಾಂಡಲ್‍ವುಡ್‍ನ ಯುವರತ್ನ, ನಟ ಪುನೀತ್ ರಾಜ್‍ಕುಮಾರ್ ಅವರ ನಿಧನದ ಬೆನ್ನಲ್ಲೇ ಕೇರಳ ಸರ್ಕಾರ ಜಿಮ್‍ಗಳಲ್ಲಿ ಎಇಡಿ ಕಡ್ಡಾಯ ಮಾಡುವಂತೆ ನಿರ್ಧಾರ ತೆಗೆದುಕೊಂಡಿದೆ.
ಕೇರಳ ಸರ್ಕಾರ ರಾಜ್ಯಾದ್ಯಂತ ಇರುವ ಎಲ್ಲ ಜಿಮ್ನಾಷಿಯಂಗಳು, ಕ್ರೀಡಾಂಗಣಗಳು, ಒಳಾಂಗಣಗಳಲ್ಲಿ ಮೂಲಭೂತ ಪ್ರಥಮ ಚಿಕಿತ್ಸಾ ಕಿಟ್‍ಗಳು ಸೇರಿದಂತೆ ಸ್ವಯಂಚಾಲಿತ ಬಾಹ್ಯ ಡಿಫಿಬ್ರಿಲೇಟರ್(ಎಇಡಿ-ಆಟೋಮೇಟೆಡ್ ಎಕ್ಸ್ಟರ್ನಲ್ ಟಿಫಿಬ್ರಿಲೇಟರ್)ಗಳನ್ನು ಬಳಕೆಗೆ ಸಿದ್ಧವಾಗಿಟ್ಟುಕೊಳ್ಳುವ ಅವಶ್ಯಕತೆಯನ್ನು ಎತ್ತಿಹಿಡಿದಿದೆ.
ನಗರದ ರಾಯಲ್ ಬ್ಯಾಡ್ಮಿಂಟನ್ ಕೋರ್ಟ್‍ನಲ್ಲಿ ಶನಿವಾರ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಾರಿಗೆ ಸಚಿವ ಅಂಟೋನಿ ರಾಜು, ಕೇರಳದ ಕ್ರೀಡಾ ಸಚಿವ ವಿ. ಆಬ್ದುರೆಹಮಾನ್ ಅವರೊಂದಿಗೆ ಚರ್ಚಿಸಿ ರಾಜ್ಯದಲ್ಲಿ ಇದನ್ನು ತುರ್ತಾಗಿ ಜಾರಿಗೆ ತರುವ ಭರವಸೆಯನ್ನು ನೀಡಿದರು. ನಟ ಪುನೀತ್ ಅಕಾಲ ಸಿಧನದ ಬಗ್ಗೆ ಬೇಸರ ಹೊರಹಾಕಿದ್ದಾರೆ.
ಹೃದಯ ಸ್ತಂಭನದಿಂದ ಮೃತಪಟ್ಟ ನಟ ಪುನೀತ್ ರಾಜ್‍ಕುಮಾರ್ ಅವರ ಅಂತ್ಯಕ್ರಿಯೆ ಈಡಿಗ ಸಂಪ್ರದಾಯದಂತೆ ನೆರವೇರಿದೆ. ಅಭಿಮಾನಿಗಳು ಪ್ರೀತಿಯ ಅಪ್ಪುನನ್ನು ಕಳೆದುಕೊಂಡಿರುವ ದುಃಖದಲ್ಲಿದ್ದಾರೆ.