ಮಂಗಳೂರು : ಬೈಕ್- ಲಾರಿ ನಡುವೆ ನಡೆದಿದ್ದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕ ಸಾವು

Share the Article

ರಾಷ್ಟ್ರೀಯ ಹೆದ್ದಾರಿ 66 ರ ಕೆಪಿಟಿ ಜಂಕ್ಷನ್ ಬಳಿ ಭಾನುವಾರ ಮಧ್ಯಾಹ್ನ ಬೈಕ್ ಗೆ ಲಾರಿ ಢಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರನ್ನು ಬೈಕ್ ಸವಾರ ಕಾರಿಂಜ ವಗ್ಗ ನಿವಾಸಿ ಪ್ರಶಾಂತ್ (37) ಎಂದು ಗುರುತಿಸಲಾಗಿದೆ.

ಮಧ್ಯಾಹ್ನ 12 ಗಂಟೆಯ ವೇಳೆಗೆ ಪೆಅಶಾಂತ್ ಅವರು ಬೈಕ್ ನಲ್ಲಿ ಯೆಯ್ಯಾಡಿ ಕಡೆಯಿಂದ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದ ಕಡೆಗೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಲಾರಿ ಓವರ್ ಟೇಕ್ ಭರದಲ್ಲಿ ಬೈಕ್ ನ ಬಲಬದಿಯಲ್ಲಿ ಹ್ಯಾಂಡಲ್ ಗೆ ಢಿಕ್ಕಿಯಾಯಿತು. ನಿಯಂತ್ರಣ ಕಳೆದುಕೊಂಡ ಪ್ರಶಾಂತ್ ರಸ್ತೆಗೆ ಬಿದ್ದು ಲಾರಿಯ ಹಿಂಬದಿಯ ಚಕ್ರಕ್ಕೆ ಸಿಲುಕಿಕೊಂಡರು. ಬಳಿಕ ಲಾರಿ ಅವರನ್ನು ಹಲವು ಮೀಟರ್ ನಷ್ಟು ದೂರಕ್ಕೆ ಎಳೆದೊಯ್ದಿತ್ತು.

ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೋಮವಾರ ಅವರು ಚಿಕಿತ್ಸೆ ಫಲಕಾರಿಯಾಗದೆ
ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply