ನ.8 ರಿಂದ ಅಂಗನವಾಡಿ ಆರಂಭ | 18 ತಿಂಗಳ ಬಳಿಕ ಮತ್ತೆ ತೆರೆಯಲಿದೆ ಅಂಗನವಾಡಿ

ಕೋವಿಡ್ ಕಾರಣದಿಂದ ಮುಚ್ಚಿದ್ದ ಶೈಕ್ಷಣಿಕ ಚಟುವಟಿಕೆಗಳು ನಿಧಾನವಾಗಿ ಆರಂಭವಾಗುತ್ತಿದ್ದು, ಈಗಾಗಲೇ ಪ್ರಾಥಮಿಕ ಶಾಲೆಯಿಂದ ಹಿಡಿದು ಕಾಲೇಜು ತನಕ ಆರಂಭವಾಗಿದೆ.ಇದೀಗ ಒಂದೂವರೆ ವರ್ಷದ ಬಳಿಕ ಅಂಗನವಾಡಿಗಳನ್ನು ತೆರೆಯಲು ಸರಕಾರ ಸಜ್ಜಾಗಿವೆ.

ನ. 8ರಿಂದ ಮುನ್ನೆಚ್ಚರಿಕ್ಕೆ ಕ್ರಮಗಳೊಂದಿಗೆ ಅಂಗನವಾಡಿಗಳನ್ನು ತೆರೆಯುವಂತೆ ಸರಕಾರ ಸೂಚಿಸಿದೆ. ಅಂಗನವಾಡಿ ಕೇಂದ್ರಕ್ಕೆ ಬರುವ ಎಲ್ಲರಿಗೂ ಕೈ ತೊಳೆಯಲು ಸೋಪು ವ್ಯವಸ್ಥೆ ಮಾಡಲಾಗುತ್ತಿದೆ. ಎಲ್ಲಾ ಮಕ್ಕಳು ಪ್ರತೀ ಅರ್ಧಗಂಟೆಗೊಮ್ಮೆ ಕೈ ತೊಳೆಯಬೇಕು.

ಪುಟಾಣಿಗಳ ಪೋಷಕರ ಒಪ್ಪಿಗೆ ಪತ್ರ ಕಡ್ಡಾಯ. ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹಾಗೂ ಹಾಜರಾಗುವ ಮಕ್ಕಳ ಪೋಷಕರು ಕಡ್ಡಾಯವಾಗಿ ಎರಡು ಡೋಸ್‌ ಲಸಿಕೆ ಪಡೆದಿರಬೇಕು. ಸಂದರ್ಶಕರಿಗೆ ನಿರ್ಬಂಧವಿರಲಿದೆ.

ಅಂಗನವಾಡಿ ಕೇಂದ್ರಗಳನ್ನು ಮೊದಲ ಹಂತದಲ್ಲಿ ಬೆಳಗ್ಗೆ 10ರಿಂದ 12ರ ವರೆಗೆ ತೆರೆಯಬಹುದಾಗಿದೆ. ಜ್ವರ, ಕೆಮ್ಮು, ನೆಗಡಿ, ಗಂಟಲು ನೋವು, ಮೈಕೈ ನೋವು, ಉಸಿರಾಟದ ಸಮಸ್ಯೆ, ರುಚಿ ಹಾಗೂ ವಾಸನೆಯನ್ನು ಕಳೆದುಕೊಳ್ಳುವ ಲಕ್ಷಣಗಳಿದ್ದರೆ ಅಂತಹ ಮಗುವನ್ನು ಕರೆತರದಂತೆ ಸೂಚಿಸಬೇಕಿದೆ.

Leave A Reply

Your email address will not be published.