ಶಿರಾಡಿ : ಚಾಲಕನ‌ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಟೆಂಪೋ ಟ್ರಾವೆಲರ್ | ಐವರಿಗೆ ಗಾಯ

Share the Article

ನೆಲ್ಯಾಡಿ : ಟೆಂಪೋ ಟ್ರಾವೆಲರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಘಟನೆ NH – 75 ರ ಶಿರಾಡಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಅಪಘಾತದಲ್ಲಿ ಐವರು ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನ.2 ರಂದು ನಸುಕಿನ ವೇಳೆ ಅಪಘಾತ ನಡೆದಿದೆ ಎನ್ನಲಾಗಿದೆ. ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ಕಳಕೊಂಡ ಟೆಂಪೊ ಟ್ರಾವೆಲ್ಲರ್ ಸುಮಾರು 60 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ ಎಂದು ಶಂಕಿಸಲಾಗಿದೆ.

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಶಿರಾಡಿ ಎಂಬಲ್ಲಿ ಘಟನೆ ನಡೆದಿದ್ದು ಐವರು ಗಾಯಾಳುಗಳನ್ನು ಪುತ್ತೂರು ಅಸ್ಪತ್ರೆಗೆ ದಾಖಲು ಮಾಡಲಾಗಿದೆ.

ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Leave A Reply