of your HTML document.

ಮದುವೆಯ ಮಾರನೇ ದಿನ ತನ್ನ ಗರ್ಲ್ ಫ್ರೆಂಡ್ ಜೊತೆಗೆ ಓಡಿಹೋದ ನವವಧು | ವಿಷಯ ತಿಳಿದು ಪತಿಗೆ ಹೃದಯಾಘಾತ!!

ಇತ್ತೀಚಿಗೆ ಮದುವೆ ವಿಷಯದಲ್ಲಿ ಹಲವು ವಿಚಿತ್ರ ಘಟನೆಗಳು ನಡೆಯುತ್ತಿರುತ್ತವೆ. ಬೇರೆ ಯಾರನ್ನೋ ಮದುವೆಯಾಗಿ ಆತನೊಂದಿಗೆ ಬಾಳಲು ಇಷ್ಟವಿಲ್ಲದೆ ಮಹಿಳೆ ಮನೆ ಬಿಟ್ಟು ಓಡಿಹೋದ ಹಲವು ಉದಾಹರಣೆಗಳಿವೆ. ಮದುವೆ ಫಿಕ್ಸ್ ಆದಮೇಲೂ ಮಂಟಪದಿಂದಲೇ ಮದುಮಗಳು ಓಡಿಹೋದ ಘಟನೆಗಳೂ ನಡೆದಿವೆ. ಆದರೆ, ಮದುವೆಯಾದ ಮರುದಿನವೇ ಮಹಿಳೆಯೊಬ್ಬರು ತನ್ನ ಗರ್ಲ್​ಫ್ರೆಂಡ್ ಜೊತೆ ಪರಾರಿಯಾಗಿದ್ದನ್ನು ಎಲ್ಲಾದರೂ ಕೇಳಿದ್ದೀರಾ?

ಇಂತಹ ವಿಚಿತ್ರವಾದ ಘಟನೆಯೊಂದು ಕೇರಳದಲ್ಲಿ ನಡೆದಿದೆ. ಕೇರಳದ ತ್ರಿಶೂರ್ನ ಮಹಿಳೆಯೊಬ್ಬರು ತಾನು ಮದುವೆಯಾದ ಮರುದಿನವೇ ಗಂಡನ ಮನೆಯಿಂದ ನಾಪತ್ತೆಯಾಗಿದ್ದಾರೆ. ಹೆಂಡತಿ ಕಾಣದ ಕಾರಣ ಆಕೆಯ ಗಂಡನಿಗೆ ಹೃದಯಾಘಾತ ಉಂಟಾಗಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ತ್ರಿಶೂರ್ನ ಪಝುವಿಲ್ನ 23 ವರ್ಷದ ಮಹಿಳೆ ಹೀಗೆ ತನ್ನ ಗೆಳತಿಯೊಂದಿಗೆ ಪರಾರಿಯಾದಾಕೆ.

ಹೆಂಡತಿ ಪರಾರಿಯಾಗಿರುವ ಬಗ್ಗೆ ಆಕೆಯ ಗಂಡ ಪೊಲೀಸರಿಗೆ ದೂರು ನೀಡಿದ್ದಾರೆ. ಆರು ದಿನ ತನಿಖೆ ಮಾಡಿದ ಪೊಲೀಸರಿಗೆ ಆಕೆ ತನ್ನ ಗೆಳತಿಯೊಂದಿಗೆ ಓಡಿ ಹೋದ ಘಟನೆ ಬೆಳಕಿಗೆ ಬಂದಿದೆ. ಆ ಮಹಿಳೆಯನ್ನು ಹುಡುಕಿ ಗಂಡನ ಮನೆಗೆ ಸೇರಿಸಲಾಗಿದ್ದು, ಆಕೆ ತನ್ನ ಮದುವೆಗೆ ಮೊದಲೇ ತನ್ನ ಗೆಳತಿಯೊಂದಿಗೆ ಓಡಿಹೋಗಲು ಬಯಸಿದ್ದಳು. ಆದರೆ, ಮನೆಯಲ್ಲಿ ತನ್ನ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣಗಳನ್ನು ತೆಗೆದುಕೊಂಡು ಓಡಿಹೋಗಲು ನಿರ್ಧರಿಸಿದ್ದ ಆಕೆ ಅದಕ್ಕಾಗಿಯೇ ಮದುವೆಯಾಗಿದ್ದಳು ಎನ್ನಲಾಗಿದೆ.

ಆಕೆಯ ಪತಿ ಚವಕ್ಕಾಡ್ ನ ಮೂಲದವರಾಗಿದ್ದು, ಪೊಲೀಸ್ ಠಾಣೆಯಲ್ಲಿ ಅ. 25ರಂದು ತನ್ನ ಹೆಂಡತಿ ನಾಪತ್ತೆಯಾಗಿರುವ ದೂರು ದಾಖಲಿಸಿದ್ದರು. ಮದುವೆಯಾದ ಮಾರನೇ ದಿನ ಬ್ಯಾಂಕ್​ಗೆ ಹೋಗಿದ್ದ. ಆಕೆ ಗಂಡನ ಮೊಬೈಲ್ ತೆಗೆದುಕೊಂಡು ನನ್ನ ಗೆಳತಿಯನ್ನು ಭೇಟಿ ಮಾಡಿ ವಾಪಾಸ್ ಬರುತ್ತೇನೆ ಎಂದು ಹೇಳಿ ಹೋಗಿದ್ದಳು. ಆದರೆ, ಬೈಕ್​ನಲ್ಲಿ ಹೋದ ಆಕೆ ಮತ್ತೆ ವಾಪಾಸ್ ಬರಲೇ ಇಲ್ಲ ಎಂದು ಪತಿ ದೂರಿನಲ್ಲಿ ತಿಳಿಸಿದ್ದರು.

ತ್ರಿಶೂರ್​ನಿಂದ ತನ್ನ ಗೆಳತಿಯೊಂದಿಗೆ ಪರಾರಿಯಾಗುವುದಕ್ಕೆ ಆ ಮಹಿಳೆ ಚೆನ್ನೈಗೆ ರೈಲು ಟಿಕೆಟ್ ಬುಕ್ ಮಾಡಿದ್ದರು. ಆದರೆ, ಸಿಕ್ಕಿ ಬೀಳುತ್ತೇವೆಂಬ ಭಯದಿಂದ ಅವರಿಬ್ಬರೂ ಬಸ್ ಮೂಲಕ ಕೊಟ್ಟಾಯಂಗೆ ಹೋಗಿ ಅಲ್ಲಿಂದ ಚೆನ್ನೈಗೆ ರೈಲಿನಲ್ಲಿ ಹೋಗಿದ್ದರು. ಅಲ್ಲಿ ಹೋಟೆಲ್​ನಲ್ಲಿ ರೂಂ ಬುಕ್ ಮಾಡಿಕೊಂಡು ಇದ್ದರು. ಅಂದಹಾಗೆ, ವಿಚಿತ್ರವೆಂದರೆ ಆಕೆಯ ಗೆಳತಿ ಕೂಡ ಕೆಲವೇ ದಿನಗಳ ಹಿಂದಷ್ಟೆ ಮದುವೆಯಾಗಿದ್ದಳು. ಇಬ್ಬರೂ ನವವಿವಾಹಿತೆಯರು ಮದುವೆಗೆ ತಮಗೆ ಹಾಕಿದ್ದ ಚಿನ್ನಾಭರಣಗಳೊಂದಿಗೆ ಮನೆಯಿಂದ ಪರಾರಿಯಾಗಿದ್ದರು. ಅವರನ್ನು ಇದೀಗ ಮಧುರೈನಲ್ಲಿ ಪತ್ತೆಹಚ್ಚಲಾಗಿದೆ.

Leave A Reply

Your email address will not be published.