ಶ್ರೀ ಕ್ಷೇತ್ರ ಕೆಮ್ಮಲೆಯಲ್ಲಿ ವಿಶೇಷ ಪೂಜೆ ,ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಭಾಗಿ

Share the Article

ಕಾಣಿಯೂರು : ಎಣ್ಮೂರು ಗ್ರಾಮದ ಹೇಮಳ ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನ, ಬ್ರಹ್ಮರ ಮೂಲಸ್ಥಾನ, ಉಳ್ಳಾಕುಲು ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ನ.6ರಂದು ನಡೆದ ವಿಶೇಷ ಪೂಜಾ ಕಾರ್ಯದಲ್ಲಿ ಶ್ರೀ ಕ್ಷೇತ್ರದ ಬ್ರಹ್ಮಕಲಶೋತ್ಸವದ ಗೌರವಾಧ್ಯಕ್ಷೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ,ಬ್ರಹ್ಮಕಲಶೋತ್ಸವದ ಕಾರ್ಯಾಧ್ಯಕ್ಷ, ಬಂದರು ಮತ್ತು ಮೀನುಗಾರಿಕೆ ಸಚಿವರಾದ ಎಸ್. ಅಂಗಾರ ಅವರು ಪಾಲ್ಗೊಂಡರು.

ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ,ಪ್ರಧಾನ‌ ಕಾರ್ಯದರ್ಶಿಗಳಾದ ರಾಕೇಶ್ ರೈ ಕೆಡೆಂಜಿ, ಸುಭೋದ್ ಶೆಟ್ಟಿ, ಎಡಮಂಗಲ ಗ್ರಾ.ಪಂ.ಅಧ್ಯಕ್ಷೆ ಸುಮಾ ನೂಚಿಲ, ಬಿಜೆಪಿ ಬೆಳಂದೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಉದನಡ್ಕ,ಬೆಳ್ಳಾರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಸಂತ ನಡುಬೈಲು,ಸುಳ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಶುಭದಾ ರೈ,ಅನೂಪ್ ಆಳ್ವ, ಚಾರ್ವಾಕ ಕಪಿಲೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಕರಂದ್ಲಾಜೆ, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ,ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನ ಮತ್ತು ಬ್ರಹ್ಮರು ಉಳ್ಳಾಕ್ಲು ಪರಿವಾರ ದೈವಗಳ ದೈವಸ್ಥಾನದ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾದ ನಿವೃತ್ತ ಮುಖ್ಯಗುರು ಬಾಲಕೃಷ್ಣ ಕೆ. ಹೇಮಳ, ಕಾರ್ಯದರ್ಶಿ ಜನಾರ್ದನ ಎ., ಉಪಾಧ್ಯಕ್ಷ ಶೇಷಪ್ಪ ಗೌಡ ,ಜೊತೆ ಕಾರ್ಯದರ್ಶಿ ಪ್ರಕಾಶ್ ಚಂದ್ರ ಹೇಮಳ, ಸದಸ್ಯರಾದ ಮಿಥುನ್ ಕೆ., ನಾರಾಯಣ, ಜಯಾನಂದ ಕೆ., ನಾರಾಯಣ ಕೆ., ಜಯಾನಂದ ಕೆ., ವಸಂತ ಎಚ್., ದಿನೇಶ ಹೆಚ್. ಮುಖೇಶ, ಗಣೇಶ ಎ., ಬಾಬು ಗೌಡ, ನಿರತ್ ಹಾಗೂ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave A Reply

Your email address will not be published.