ಪ್ರಧಾನಿ ಮೋದಿ,ಉತ್ತರ ಪ್ರದೇಶ ಸಿಎಂ ಯೋಗಿ ಅವರನ್ನು ಬಾಂಬ್ ಸ್ಪೋಟಿಸಿ ಹತ್ಯೆಗೈಯುವ ಬೆದರಿಕೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬಾಂಬ್ ಸ್ಪೋಟಿಸಿ ಹತ್ಯೆ ಮಾಡುವುದಾಗಿ ಟ್ವಿಟರ್‌ನಲ್ಲಿ ವ್ಯಕ್ತಿಯೊಬ್ಬ ಬರೆದುಕೊಂಡಿದ್ದಾನೆ.

ಈ ಬಗ್ಗೆ ಟ್ವಿಟರ್ ಬಳಕೆದಾರರೊಬ್ಬರು ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಸಿಪಿ ಪ್ರಮೋದ್ ಕುಮಾರ್ ತಿವಾರಿ, ಟ್ವಿಟರ್‌ನಲ್ಲಿ ಪ್ರಧಾನಿ ಮತ್ತು ಮುಖ್ಯಮಂತ್ರಿಯವರಿಗೆ ಬೆದರಿಕೆ ಹಾಕಿರುವ ಬಗ್ಗೆ ನಮ್ಮ ಸಹಾಯವಾಣಿಗೆ ಯಾರೋ ಒಬ್ಬರು ಕರೆ ಮಾಡಿ ಹೇಳಿದ್ದಾರೆ. ಆಗ ವಿಷಯ ತಿಳಿದಿದೆ ಎಂದಿದ್ದಾರೆ.

ಈ ಬಗ್ಗೆ ತನಿಖೆ ಶುರು ಮಾಡಿದ್ದೇವೆ. ಇದು ಕಿಡಿಗೇಡಿಗಳ ಕೃತ್ಯ ಬೇರೆ ಹೆಸರು ನೀಡಿ ಖಾತೆ ತೆರೆಯಲಾಗಿದೆ. ಈಗಾಗಲೇ ತನಿಖೆ ಶುರು ಮಾಡಿದ್ದೇವೆ. ಟ್ವಿಟರ್ ಸಂಸ್ಥೆಗೆ ಈ ಬಗ್ಗೆ ಮಾಹಿ ನೀಡಲಾಗಿದೆ. ಅಲ್ಲಿಂದ ಶೀಘ್ರದಲ್ಲಿ ಆರೋಪಿಯ ಗುರುತು ಪತ್ತೆಯಾಗಲಿದೆ. ಅಧಿಕೃತ ಹೆಸರನ್ನು ತನಿಖೆ ಮುಗಿಯುವವರೆ ಗೆ ಬಹಿರಂಗಪಡಿಸುವುದಿಲ್ಲ.

Ad Widget

Ad Widget

Ad Widget

Ad Widget

Ad Widget Ad Widget

Ad Widget

Ad Widget

ಆ ಬಳಕೆದಾರ ಯಾರು ಎಂದು ಕಂಡುಹಿಡಿದು ಮುಂದಿನ ಕ್ರಮ ಜರುಗಿಸುತ್ತೇವೆ ಎಂದು ತಿವಾರಿ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ ಇದೇ ರೀತಿಯ ಬೆದರಿಕೆ ಹಾಕಲಾಗಿತ್ತು. ಬೆದರಿಕೆ ಜತೆಗೆ ಕೆಲವೊಂದು ಆಕ್ಷೇಪಾರ್ಹ ಕಾಮೆಂಟ್‌ಗಳನ್ನೂ ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದಿದ್ದಾರೆ.

Leave a Reply

error: Content is protected !!
Scroll to Top
%d bloggers like this: