ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿಯ ಆಂಟಿಲಾ ನಿವಾಸದ ವಿಳಾಸ ಕೇಳಿಕೊಂಡು ಬಂದ ಅಪರಿಚಿತರು|ಮನೆ ಸಂಪರ್ಕಿಸುವ ಮಾರ್ಗಗಳಲ್ಲಿ ಬಿಗಿ ಭದ್ರತೆ

ಮುಂಬೈ: ಅವರ ಆಂಟಿಲಾ ಕ್ಯಾಬ್ ಚಾಲಕನ ಬಳಿ ಅಪರಿಚಿತರು ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಅವರ ಆಂಟಿಲಾದ ವಿಳಾಸ ಕೇಳಿದ ಹಿನ್ನೆಲೆಯಲ್ಲಿ ನಿವಾಸಕ್ಕೆ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ.

ಆಂಟಿಲಾ ವಿಳಾಸ ಕೇಳುತ್ತಿದ್ದ ವ್ಯಕ್ತಿಗಳ ಬಳಿ ಬ್ಯಾಗ್ ಇದ್ದು, ಸಂಶಯಾಸ್ಪದವಾಗಿ ವರ್ತಿಸುತ್ತಿದ್ದರು ಎಂದು ಕ್ಯಾಬ್ ಚಾಲಕ ಮಾಹಿತಿ ನೀಡಿದ್ದು, ಮುಕೇಶ್ ಅಂಬಾನಿ ನಿವಾಸಕ್ಕೆ ತೆರಳುವ ಮಾರ್ಗದಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಮುಂಬೈನ ಅಲ್ಟಾಮೌಂಟ್ ರಸ್ತೆಯಲ್ಲಿರುವ ನಿವಾಸಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ. ನಿವಾಸ ಸಂಪರ್ಕಿಸುವ ಮಾರ್ಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿ ತಪಾಸಣೆ ನಡೆಸಲಾಗಿದೆ.

ಟ್ಯಾಕ್ಸಿ ಡ್ರೈವರ್‌ನಿಂದ ಕಂಟ್ರೋಲ್ ರೂಮ್ ಗೆ ಕರೆ ಬಂದಿದ್ದು, ಇಬ್ಬರು ಬ್ಯಾಗ್ ಹೊತ್ತೊಯ್ಯುತ್ತಿದ್ದವರು ಮುಖೇಶ್ ಅಂಬಾನಿ ಅವರ ನಿವಾಸ ಆಂಟಿಲಿಯಾವನ್ನು ಕೇಳಿದ್ದಾರೆ. ಡಿಸಿಪಿ ಮಟ್ಟದ ಅಧಿಕಾರಿ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಆಂಟಿಲಿಯಾ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನೂ ಪರಿಶೀಲಿಸಲಾಗುತ್ತಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

Leave A Reply

Your email address will not be published.