ಬಂಟ್ವಾಳ : ಕಾರಿಂಜೇಶ್ವರ ದೇವಸ್ಥಾನದಲ್ಲಿ ಪಾವಿತ್ರ್ಯತೆಗೆ ಧಕ್ಕೆ ತರುವ ಕೃತ್ಯ ಎಸಗುವವರಿಗೆ ಎಚ್ಚರಿಕೆಯ ಬ್ಯಾನರ್ ಅಳವಡಿಸಿದ ಪೊಲೀಸ್ ಇಲಾಖೆ

ದೇವಸ್ಥಾನಕ್ಕೆ ಪಾವಿತ್ರ್ಯಕ್ಕೆ ಧಕ್ಕೆ ತರುವ ಕೃತ್ಯ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದ್ದು, ಈ ಬಗ್ಗೆ ಎಚ್ಚರಿಕೆಯ ಬ್ಯಾನರ್ ಒಂದನ್ನು ಪೊಲೀಸರು ಕಾರಿಂಜೇಶ್ವರ ದೇವಸ್ಥಾನದ ಪರಿಸರದಲ್ಲಿ ಅಳವಡಿಸಿದ್ದಾರೆ.

ಕಾವಳಮೂಡೂರು ಗ್ರಾಮದ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಪರಿಸರದಲ್ಲಿ ದೇಗುಲದ ಪಾವಿತ್ರ್ಯಕ್ಕೆ ಧಕ್ಕೆ ತರುವಂತಹ ಮದ್ಯಪಾನ, ಧೂಮಪಾನ ಅಥವಾ ಇನ್ನಾವುದೇ ಅನೈತಿಕ ಚಟುವಟಿಕೆಗಳನ್ನು ಮಾಡಬಾರದು. ಇಂತಹ ಚಟುವಟಿಕೆಗಳು ಪರಿಸರದಲ್ಲಿ ಕಂಡು ಬಂದಲ್ಲಿ ತುರ್ತು ಸ್ಪಂದನಾ ಸೇವೆ ನಂಬರ್ (ERSS): 112, ಪುಂಜಾಲಕಟ್ಟೆ ಪೊಲೀಸ್ ಠಾಣೆ 08256-279375, 8277986411 ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಎಂಬ ಪ್ರಕಟಣೆಯ ಬ್ಯಾನರ್ ಅನ್ನು ಪೊಲೀಸರು ಕಾರಿಂಜ ದೇವಾಲಯದ ಪರಿಸರದಲ್ಲಿ ಪ್ರಕಟಿಸಿದ್ದಾರೆ.

ಇತ್ತೀಚಿಗೆ ಅನ್ಯಧರ್ಮದ ಯುವಕರು ಚಪ್ಪಲಿ ಧರಿಸಿ ದೇವಸ್ಥಾನ ಪ್ರವೇಶಿಸಿದ್ದ ವಿಡಿಯೋ ಹರಿದಾಡಿತ್ತು. ಈ ಕೃತ್ಯ ಎಸಗಿದವರ ಬಂಧನ ಕೂಡ ಆಗಿತ್ತು. ಆದರೆ ಇದಕ್ಕೆ ಕಡಿವಾಣ ಹಾಕುವ ಪ್ರಯತ್ನದಲ್ಲಿ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಈ ಕ್ರಮದ ಮೂಲಕ ಎಚ್ಚರಿಕೆ ನೀಡಿದೆ.

Leave A Reply

Your email address will not be published.