ಮಡಿಕೇರಿ : ಕುಟ್ಟಪ್ಪ ಸಂಸ್ಮರಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಹಿಂದೂ ಜಾಗರಣ ವೇದಿಕೆಯ ಉಪಾಧ್ಯಕ್ಷರು ಸಹಿತ 10 ಮಂದಿಯನ್ನು ಬಂಧಿಸಿದ ಪೊಲೀಸರು | ಹಿಂದೂಪರ ಸಂಘಟನೆಗಳಿಂದ ಭಾರೀ ಆಕ್ರೋಶ

ಕುಟ್ಟಪ್ಪ ಸಂಸ್ಮರಣೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಕಾಂತ್ ಶೆಟ್ಟಿ ಮತ್ತು ಮಂಗಳೂರು ವಿಭಾಗ ಪ್ರಧಾನ ಕಾರ್ಯದರ್ಶಿಯಾದ ಪ್ರಕಾಶ್ ಕುಕ್ಕೆಹಳ್ಳಿ ಅವರನ್ನು ಕೊಡಗು ಪೊಲೀಸರು ವಶಕ್ಕೆ ಪಡೆದು ಕೊಂಡ ಘಟನೆ ಇಂದು ನಡೆದಿದೆ.

ಇಂದು (ನವೆಂಬರ್ 10) ಕರಾಳ ದಿನ ಆಚರಣೆ ಹಿನ್ನೆಲೆ ಕೊಡಗು ಜಿಲ್ಲಾಡಳಿತ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಿತ್ತು. ವಿಶ್ವಹಿಂದೂ ಪರಿಷತ್ ಹಾಗು ಹಿಂದು ಪರ ಸಂಘಟನೆಗಳು ಕುಟ್ಟಪ್ಪನವರ ಹುತಾತ್ಮ ದಿನ ಆಚರಣೆ ಹಾಗು ಮೆರವಣಿಗೆ ಹಮ್ಮಿಕೊಂಡಿತ್ತು. ಓಂಕಾರೇಶ್ವರ ದೇವಾಲಯದಲ್ಲಿ ಶಾಂತಿ ಪೂಜೆ ನೆರವೇರಿಸಿ ಹೊರ ಬರುತ್ತಿದ್ದಂತೆಯೇ ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಕೃಷ್ಣಮೂರ್ತಿ ಸೇರಿದಂತೆ ಹತ್ತು ಮಂದಿ ಹಿಂದು ಪರ ಸಂಘಟನೆಯ ಮುಖಂಡರನ್ನು ಪೋಲೀಸರು ಬಂಧಿಸಿದ್ದಾರೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಇನ್ನೊಂದು ಕಡೆ ಕುಟ್ಟಪ್ಪ ಸಂಸ್ಮರಣೆ ಕಾರ್ಯಕ್ರಮದಲ್ಲಿ ಭಾಷಣ ಮಾಡಲು ತೆರಳುತ್ತಿದ್ದ ಪ್ರಮುಖ ವಾಗ್ಮಿ ಶ್ರೀಕಾಂತ್ ಶೆಟ್ಟಿ ಮತ್ತು ಪ್ರಕಾಶ್ ಕುಕ್ಕೆ ಹಳ್ಳಿ ಅವರನ್ನು ಮಡಿಕೇರಿ ಸಂಪರ್ಕಿಸುವ ರಸ್ತೆ ಮದ್ಯೆಯೇ ವಾಹನ ಅಡ್ಡಗಟ್ಟಿ ಕೊಡಗು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅದಲ್ಲದೆ ಅವರನ್ನು ದೂರವಾಣಿ ಸಂಪರ್ಕಕ್ಕೆ ಸಿಗದ ಜಾಗದಲ್ಲಿ ವಶಕ್ಕೆ ಪಡೆಯಲು ಪ್ರಯತ್ನ ನಡೆಸಲಾಗಿದೆ ಎಂಬ ಮಾತು ಕೇಳಿಬರುತ್ತಿದೆ. ಚೌಡೇಶ್ವರಿ ದೇವಾಲಯದಲ್ಲಿ ಪೂಜೆ ಹಾಗು ಮೆರವಣಿಗೆಯನ್ನು ಹಿಂದು ಪರ ಸಂಘಟನೆಗಳು ಘೋಷಿಸಿರುವ ಹಿನ್ನೆಲೆ ಇದೀಗ ಸಂಘಟನೆಯ ಪ್ರಮುಖರ ಬಂಧನದಿಂದ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶಗೊಳ್ಳುವಂತೆ ಮಾಡಿದೆ.

Leave a Reply

error: Content is protected !!
Scroll to Top
%d bloggers like this: