ಪುತ್ತೂರು : ವಿದ್ಯಾಮಾತ ಅಕಾಡೆಮಿಯಲ್ಲಿ ಬ್ಯಾಂಕಿಂಗ್ ಪರೀಕ್ಷಾ ತರಬೇತಿ ಪ್ರಾರಂಭ

ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತ ಅಕಾಡೆಮಿಯಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳ ತರಬೇತಿ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಬ್ಯಾಂಕಿಂಗ್ ಪರೀಕ್ಷೆಗಳ ಮಾಹಿತಿ ಕುರಿತ ಕಾರ್ಯಾಗಾರಕ್ಕೆ ಚಾಲನೆಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ರಾಮಕುಂಜೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಸತೀಶ್ ಭಟ್ ರವರನ್ನು ಗ್ರಾಮೀಣ ಪ್ರದೇಶದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಜಾಗೃತಿ ಮೂಡಿಸುತ್ತಿರುವುದಕ್ಕಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾಮಾತ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ಯವರು ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು. ಬ್ಯಾಂಕಿಂಗ್ ಪರೀಕ್ಷಾ ತರಬೇತಿಯು ಸೋಮವಾರದಿಂದ ಪ್ರಾರಂಭವಾಗಲಿದ್ದು ಆಫ್ಲೈನ್ ಮತ್ತು ಆನ್ಲೈನ್ ತರಗತಿಗಳ 2 ಬ್ಯಾಚನ್ನು ಮಾಡಲಾಗಿದ್ದು, ಆಫ್ಲೈನ್ ತರಗತಿಗಳು ವಾರದ ನಾಲ್ಕು ದಿನ ಬೆ.9 ರಿಂದ ಮ.3 ರ ವರೆಗೆ ಮತ್ತು ಆನ್ಲೈನ್ ತರಗತಿಗಳು ವಾರದ 6 ದಿನ ರಾತ್ರಿ 7 ರಿಂದ 9 ರ ವರೆಗೆ 2 ಗಂಟೆಗಳು ನಡೆಯುತ್ತವೆ. ಪ್ರಾಯೋಗಿಕ ಪರೀಕ್ಷೆಗಳು, ಕಾರ್ಯಾಗಾರಗಳನ್ನು ಒಳಗೊಂಡಂತೆ ರಾಷ್ಟ್ರೀಕೃತ, ಗ್ರಾಮೀಣ, ಸಹಕಾರಿ ಬ್ಯಾಂಕ್ ಗಳು ಹಾಗೂ ಕೆಎಂಎಫ್, ಕ್ಯಾಂಪ್ಕೋ ಸೇರಿದಂತೆ ಸಹಕಾರಿ ಸಂಘಗಳಿಗೆ ಅನ್ವಯವಾಗುವಂತೆ ಬ್ಯಾಂಕಿಂಗ್ ತರಬೇತಿಯನ್ನು ನೀಡಲಾಗುತ್ತದೆ ಎಂದು ಭಾಗ್ಯೇಶ್ ರೈ ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ವಿದ್ಯಾಮಾತ ಅಕಾಡೆಮಿಯ ತರಬೇತುದಾರರಾದ ನವೀನ್, ಚಂದ್ರಕಾಂತ್, ವಿಜೇತ, ದೀಕ್ಷಿತರವರು ಉಪಸ್ಥಿತರಿದ್ದರು.

Leave A Reply

Your email address will not be published.