ದಕ್ಷಿಣ ಕನ್ನಡ ದ್ವಿಸದಸ್ಯತ್ವ ಕ್ಷೇತ್ರದಿಂದ ಸಹಕಾರಿ ಕ್ಷೇತ್ರದ ದಿಗ್ಗಜ ಡಾ| ಎಂ.ಎನ್.ರಾಜೇಂದ್ರ ಕುಮಾರ್ ವಿಧಾನ ಪರಿಷತ್ ಚುನಾವಣೆಗೆ ಪಕ್ಷೇತರರಾಗಿ ಕಣಕ್ಕಿಳಿಯಳಿಲು ಸಿದ್ಧ!!
ಕಡಬ : ಕರ್ನಾಟಕ ವಿಧಾನ ಪರಿಷತ್‌ಗೆ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ರಾಜಕೀಯ ಚಟುವಟಿಕೆಗಳು ಆರಂಭಗೊಂಡಿದ್ದು ಯಾರು ಚುನಾವಣೆಗೆ ಇಳಿಯಬಹುದೆಂಬ ಕುತೂಹಲ ಹೆಚ್ಚಾಗಿದೆ.
ದಕ್ಷಿಣ ಕನ್ನಡ ದ್ವಿಸದಸ್ಯತ್ವ ಕ್ಷೇತ್ರದಿಂದ ಸಹಕಾರಿ ಕ್ಷೇತ್ರದ ದಿಗ್ಗಜ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಪಕ್ಷೇತರರಾಗಿ ಕಣಕ್ಕಿಳಿಯಳಿದ್ದಾರೆ ಎಂದು ತಿಳಿದು ಬಂದಿದೆ.ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ರಾಜೇಂದ್ರ ಕುಮಾರ್ ರವರು ಕಳೆದ 27 ವರ್ಷಗಳಿಂದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿದ್ದಾರೆ. ವಿಧಾನ ಪರಿಷತ್‌ನಲ್ಲಿ ಸಹಕಾರ ಕ್ಷೇತ್ರದವರಿಗೂ ಆದ್ಯತೆ ನೀಡುವಂತೆ ಪ್ರತಿಪಾದಿಸಿದ್ದರು.ಈ ಹಿಂದೆ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದರೂ ಬಿಜೆಪಿ ಮತ್ತು ಜೆಡಿಎಸ್ ನಾಯಕರೊಂದಿಗೆ ಉತ್ತಮ ಬಾಂಧವ್ಯ
ಇಟ್ಟುಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾ.ಪಂ.ಸದಸ್ಯರಲ್ಲಿ ಹೆಚ್ಚಿನವರು ಸಹಕಾರಿ ಕ್ಷೇತ್ರದ ಹಿನ್ನಲೆ ಉಳ್ಳವರಾಗಿದ್ದಾರೆ.ಗ್ರಾ.ಪಂ.ಮಹಿಳಾ ಸದಸ್ಯರಲ್ಲಿಯೂ ಬಹುತೇಕರು ನವೋದಯ ಸ್ವಸಹಾಯ ಸಂಘದಲ್ಲಿ ಗುರುತಿಸಿಕೊಂಡವರಾಗಿದ್ದಾರೆ.ಗ್ರಾ.ಪಂ. ಸದಸ್ಯರು ಅಧಿಕೃತವಾಗಿ ಯಾವುದೇ ಪಕ್ಷದ ಚಿಹ್ನೆಯಿಂದ ಗೆದ್ದವರಲ್ಲ, ಡಾ| ರಾಜೇಂದ್ರ ಕುಮಾರ್ ಸ್ಪರ್ಧಿಸಿದರೆ ಅವರನ್ನು ಬೆಂಬಲಿಸಲೂಬಹುದು ಎನ್ನಲಾಗುತ್ತಿದೆ.