ರಾಜ್ಯದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರು ಜಾರಿ-ಸಚಿವ ಎಸ್.ಟಿ. ಸೋಮಶೇಖರ್

ಬೆಂಗಳೂರು : ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರು ಜಾರಿಯಾಗಲಿದೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಸಚಿವ ಎಸ್.ಟಿ. ಸೋಮಶೇಖರ್ ಅವರು, ರಾಜ್ಯದ ಸಹಕಾರಿ ಕ್ಷೇತ್ರ ಮತ್ತು ಬಡ ರೈತರ ಪಾಲಿಕೆ ಈ ಯೋಜನೆ ಸಂಜೀವಿನಿಯಾಗಲಿದೆ. ಸರ್ಕಾರದ ಮಟ್ಟದಲ್ಲಿ ಈ ಯೋಜನೆಯ ಮರು ಜಾರಿಯ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ಯೋಜನೆ ಮರು ಜಾರಿಯಾದಲ್ಲಿ ಸಹಕಾರ ಕ್ಷೇತ್ರ ಮತ್ತು ರೈತಾಪಿ ವರ್ಗದ ಲಕ್ಷಾಂತರ ಜನಕ್ಕೆ ಸಹಾಯವಾಗಲಿದೆ ಎಂದು ಹೇಳಿದ್ದಾರೆ.

ಯಶಸ್ವಿನಿ ಯೋಜನೆ ಮರು ಜಾರಿ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತರಲಾಗಿದೆ. ವಿಧಾನ ಪರಿಷತ್ ಚುನಾವಣೆ ಈ ಯೋಜನೆಗೆ ಸ್ಪಷ್ಟ ರೂಪ ಸಿಗಲಿದೆ ಎಂದು ಸುಳಿವು ನೀಡಿದ್ದಾರೆ.

Leave A Reply

Your email address will not be published.