ಬಿಸಿಯೇರಿದ ವಿಧಾನ ಪರಿಷತ್ ಚುನಾವಣಾ ಕಣ | ದೇವೇಗೌಡ- ಕುಮಾರಸ್ವಾಮಿ ಹೆಸರು ಹೇಳಿದರೆ ಓಡೋಡಿ ಬಂದು ಮತ ಹಾಕುವವರು ಯಾರು ಇಲ್ಲ ಎಂದ ಜೆಡಿಎಸ್ ಶಾಸಕ !!

ಹಾಸನ: ವಿಧಾನ ಪರಿಷತ್ ಚುನಾವಣೆ ಕುರಿತು ಬಿಸಿ-ಬಿಸಿ ಚರ್ಚೆಗಳು ಪ್ರಾರಂಭವಾಗಿದೆ. ಯಾವ ಪಟ್ಟಕ್ಕೆ ಯಾರ ಹೆಸರು ಬೀಳಲಿದೆ ಎಂಬ ಪೈಪೋಟಿ ಶುರುವಾಗಿದ್ದು,ಎಲ್ಲೆಡೆ ರಾಜಕೀಯ ಪ್ರಚಾರ ಶುರು ಹಚ್ಚಿಕೊಂಡಿದೆ.

ಜನವರಿಯಲ್ಲಿ ತೆರವಾಗುತ್ತಿರುವ ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆ ಹಿನ್ನೆಲೆ ಜಿಲ್ಲೆಯ ಸಂಸದ ಪ್ರಜ್ವಲ್​​ ರೇವಣ್ಣ ಅವರ ಅಧಿಕೃತ ನಿವಾಸದಲ್ಲಿ ಜೆಡಿಎಸ್ ಶಾಸಕರು, ಮುಖಂಡರು, ಕಾರ್ಯಕರ್ತರ ಸಭೆ ನಡೆಸಿದ್ದು, ರೇವಣ್ಣ ಫ್ಯಾಮಿಲಿ ಹೆಸರು ಟಿಕೆಟ್ ಪಟ್ಟಿಯಲ್ಲಿ ಸದ್ದು ಮಾಡುತ್ತಿದೆ.

ಅಭ್ಯರ್ಥಿ ಆಯ್ಕೆ ಸಂಬಂಧ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಶಾಸಕರುಗಳಾದ ಎಚ್.ಡಿ.ರೇವಣ್ಣ, ಕೆ.ಎಸ್.ಲಿಂಗೇಶ್, ಮಾಜಿಶಾಸಕರು, ಜಿ.ಪಂ. ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಗಿದ್ದು,ಟಿಕೆಟ್​​ ಗಾಗಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪುತ್ರ ಡಾಕ್ಟರ್ ಸೂರಜ್ ಹೆಸರು ಹಾಗೂ ರೇವಣ್ಣ ಪತ್ನಿ ಭವಾನಿ ರೇವಣ್ಣ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದೆ.

ಸಭೆಯಲ್ಲಿ ಬೇಲೂರು ಶಾಸಕ ಕೆ.ಎಸ್.ಲಿಂಗೇಶ್ ಮಾತನಾಡಿ, ‘ನಾನು ಜೆಡಿಎಸ್ ಜಿಲ್ಲಾಧ್ಯಕ್ಷನಾಗಿ ಸರ್ವೆ ಮಾಡಿದ್ದೇನೆ. ಎಲ್ಲರ ಅಭಿಪ್ರಾಯ ಒಂದೇ ಆಗಿದೆ. ಭವಾನಿ ರೇವಣ್ಣ ಅವರಿಗೆ ಟಿಕೆಟ್ ಕೊಡಿ, ಅವರನ್ನು ನಾವು ಗೆಲ್ಲಿಸಿಕೊಂಡು ಬರುತ್ತೇವೆ’ಎಂದರು. ಜಿಲ್ಲೆಯಲ್ಲಿ ಶೇ.60 ರಿಂದ 70 ರಷ್ಟು ಜೆಡಿಎಸ್ ಗ್ರಾಮ ಸದಸ್ಯರಿದ್ದಾರೆ. ಭವಾನಿ ರೇವಣ್ಣ ಅವರಿಗೆ ಟಿಕೆಟ್ ನೀಡಿ ಎಂದು ಸಭೆಯಲ್ಲಿ ಒತ್ತಾಯ ಕೇಳಿ ಬಂತಿತು.

ಸಭೆಯಲ್ಲಿ ಶಾಸಕ ಶಿವಲಿಂಗೇಗೌಡ ಅಸಮಧಾನ ವ್ಯಕ್ತಪಡಿಸಿದ್ದು,ಈ ಸಭೆ ಬಗ್ಗೆ ನನಗೆ ಗೊತ್ತೇ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ನಾನು ದೇವೇಗೌಡರ ಸಮ್ಮುಖದಲ್ಲಿ ಶಾಸಕರು-ಸಂಸದರ ಸಭೆ ಎಂದುಕೊಂಡಿದ್ದೆ. ಹೀಗೆ ಸಭೆ ಅಂದಿದ್ರೆ ನಾನು ಬರ್ತಾನೆ ಇರ್ಲಿಲ್ಲ. ನೀವು ಏನಾದ್ರು ಅಂದುಕೊಳ್ಳಿ ನಾನು ನೇರವಾಗೇ ಹೇಳ್ತೀನಿ.ದೇವೇಗೌಡರ, ಕುಮಾರಸ್ವಾಮಿ ಹೆಸರು ಹೇಳಿದ ಕೂಡಲೆ ಓಟ್ ಬರಲ್ಲ ಎಂದು ನೇರವಾಗಿಯೇ ಶಿವಲಿಂಗೇಗೌಡ ಹೇಳಿದ್ದಾರೆ.ನೀವು ಯಾರಿಗೆ ಹೇಳ್ತೀರೋ ಅವರಿಗೆ ಓಟ್ ಹಾಕೊಕೆ ನಾವ್ ರೆಡಿ. ಕಳೆದ ಬಾರಿ ಪಟೇಲ್ ಶಿವರಾಂ ಸೋಲಿಗೆ ನಾನೇ ಕಾರಣ ಎಂದು ನನ್ನ ಮೇಲೆ‌ ಕಳಂಕ ಇದೆ. ನನ್ನ ಹೆತ್ತ ತಾಯಿ, ಇರುವ ಒಬ್ಬ ಮಗನ ಮೇಲಾಣೆ ನಾನು ಮೋಸಗಾರ ಅಲ್ಲಾ ಎಂದು ಶಿವಲಿಂಗೇಗೌಡ ಆಣೆ ಮಾಡಿದ್ದಾರೆ.

Leave A Reply

Your email address will not be published.