ಇನ್ಮುಂದೆ KSRTC ಬಸ್ಸುಗಳಲ್ಲಿ ಮೊಬೈಲ್ ಪೋನ್ ಬಳಸುವಂತಿಲ್ಲ | ಏನಿದೆ KSRTC ಹೊರಡಿಸಿದ ಹೊಸ ಆದೇಶದಲ್ಲಿ ?!
ಸರ್ಕಾರಿ ಬಸ್ ಪ್ರಯಾಣದ ವೇಳೆ ಮೊಬೈಲ್ ಫೋನ್ ಬಳಿಸಿ ಪ್ರಯಾಣಿಕರು ಮಾತನಾಡುವುದನ್ನು ನಿಷೇಧಿಸಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ 1989ರ ನಿಯಮ 94(1)V ಪ್ರಕಾರ ಬಸ್‌ಗಳಲ್ಲಿ ಜೋರಾಗಿ ಶಬ್ದ ಉಂಟು ಮಾಡಿ ಮೊಬೈಲ್ ಬಳಸುವುದಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದರಿಂದ ಶಬ್ದಮಾಲಿನ್ಯ ಉಂಟಾಗುವದರ ಜೊತೆ ಪ್ರಯಾಣಿಕರಿಗೂ ಕಿರಿಕಿರಿ ಉಂಟಾಗುತ್ತಿರುವ ಬಗ್ಗೆ ಹಲವು ದೂರಗಳ ಹಿನ್ನೆಲೆ, ಕೆಎಸ್‌ಆರ್ಟಿಸಿ ಈ ಬಗ್ಗೆ ಸುತ್ತೋಲೆ ಹೊರಡಿಸಿ ಆದೇಶಿಸಿದೆ.
ಪ್ರಯಾಣದ ವೇಳೆ ಹಾಡು, ಸಿನಿಮಾ ಮುಂತಾದವುಗಳನ್ನು ಜೋರಾಗಿ ಹಾಕುವಂತಿಲ್ಲ. ಒಂದು ವೇಳೆ ಹಾಕಿದರೆ ಮೊದಲು ಬಸ್ ನಿರ್ವಾಹಕ ಪ್ರಯಾಣಕನಲ್ಲಿ ಮನವಿ ಮಾಡಿಕೊಳ್ಳಬೇಕು. ಮನವಿ ಕಡೆಗಣಿಸಿದರೆ ಬಸ್ ಅರ್ಧಕ್ಕೆ ನಿಲ್ಲಿಸಿ ಪ್ರಯಾಣಿಕರನ್ನು ಅಲ್ಲೇ ಇಳಿಸಿ ಮುಂದುವರೆಯ ಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಏನಾದರು ಸಮಸ್ಯೆಗಳು ಎದುರಾದರೆ ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆಗೆ ವಿಷಯ ತಿಳಿಸಬೇಕು ಎಂದು ಆದೇಶಲ್ಲಿ ಉಲ್ಲೇಖಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ಜನ ಮೊಬೈಲ್‌ಗೆ ಹೆಚ್ಚು ಅವಲಂಬಿತರಾಗಿದ್ದು, ಬಸ್ಸಿನಲ್ಲಿ ಪ್ರಯಾಣಿಸುವ ಸಹ ಪ್ರಯಾಣಿಕರ ಕಡೆಗೆ ಗಮನ ಕೊಡದೆ ತಮ್ಮಿಷ್ಟದಂತೆ ಜೋರಾಗಿ ಹಾಡು, ಸಿನಿಮಾ, ವಾರ್ತೆ ಮೊದಲಾದ ಆಡಿಯೋ ಅಥವಾ ವಿಡಿಯೋಗಳನ್ನು ಜೋರಾಗಿ ಹಾಕುವುದು ಸರ್ವೇ ಸಾಮಾನ್ಯವಾಗಿದೆ. ಬಸ್‌ನಲ್ಲಿ ಪ್ರಯಾಣಿಕರಿಗೆ ಮೊಬೈಲ್ ತಲೆನೋವು ತಪ್ಪಿಸಲು ಹಾಗೂ ಶಬ್ದ ಮಾಲಿನ್ಯಕ್ಕೆ ಕಡಿವಾಣ ಹಾಕಲು ಹೈಕೋರ್ಟ್ ಸೂಚನೆ ಮೇರೆಗೆ ಸಾರಿಗೆ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ತುಮಕೂರಿನ ವಕೀಲ ರೊಬ್ಬರು ಈ ಬಗ್ಗೆ ಪಿಐಎಲ್ ದಾಖಲಿಸಿದ್ದರು. ಬಸ್‌ನಲ್ಲಿ ಮೊಬೈಲ್ ಕಿರಿಕಿರಿ ತಪ್ಪಿಸುವಂತೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಿಸುವಂತೆ ತುಮಕೂರಿನ ವಕೀಲ ರಮೇಶ್ ನಾಯಕ್ ಎಲ್. ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆಗೆ ನಿರ್ದೇಶನ ನೀಡಿತ್ತು. ಇದರ ಅನ್ವಯ ಇಲಾಖೆಯು ಎಲ್ಲಾ ಸಾರಿಗೆ ನಿಗಮಗಳಿಗೆ ಕಟ್ಟುನಿಟ್ಟಿನ ಕ್ರಮ ಅನುಷ್ಠಾನಕ್ಕೆ ಖಡಕ್ ಸೂಚನೆ ನೀಡಿದೆ.
no prescription ventolin hfa: Ventolin inhaler best price – can you buy ventolin over the counter in uk
can you buy ventolin over the counter in usa
buy ventolin tablets uk: Buy Albuterol inhaler online – ventolin tablet
lasix side effects: buy furosemide – buy furosemide online
online pharmacy india: Indian pharmacy online – india pharmacy
canadian pharmacy reviews: Cheapest online pharmacy – legal to buy prescription drugs from canada