ಬುಡೋಳಿ : 30 ಅಡಿ ಆಳಕ್ಕೆ ಉರುಳಿ ಬಿದ್ದ ಟ್ಯಾಂಕರ್

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಗ್ಯಾಸ್ ಟ್ಯಾಂಕರ್ 30 ಅಡಿ ಆಳಕ್ಕೆ ಉರುಳಿ ಬಿದ್ದ ಘಟನೆ ಸಂಭವಿಸಿದೆ.

ಬೆಂಗಳೂರು ಕಡೆಯಿಂದ ಗ್ಯಾಸ್ ಖಾಲಿ ಮಾಡಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಘಟನೆಯಿಂದ ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಪ್ರಪಾತದಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ರಕ್ಷಿಸಿದ್ದಾರೆ.

Leave A Reply

Your email address will not be published.