ನವೆಂಬರ್ 29 ರಿಂದ ಡಿಸೆಂಬರ್ 10ರ ವರೆಗೆ ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆ!! ಪರೀಕ್ಷಾ ವೇಳಾಪಟ್ಟಿ ಬಿಡುಗಡೆಗೊಳಿಸಿದ ಶಿಕ್ಷಣ ಇಲಾಖೆ

ರಾಜ್ಯಾದ್ಯಂತ ಪದವಿಪೂರ್ವ ಶಿಕ್ಷಣ ಇಲಾಖೆಯ 2021-22 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಧ್ಯವಾರ್ಷಿಕ ಪರೀಕ್ಷೆ ನಡೆಸಲು ಈಗಾಗಲೇ ತೀರ್ಮಾನಿಸಲಾಗಿದ್ದು, ಪರೀಕ್ಷೆಯು ನವೆಂಬರ್ 29 ರಿಂದ ಡಿಸೆಂಬರ್ 10 ರ ವರೆಗೆ ನಡೆಯಲಿದ್ದು ಆಯಾ ವಿಷಯಗಳ ಪರೀಕ್ಷಾ ದಿನಾಂಕ ಬಿಡುಗಡೆಯಾಗಿದೆ.

ಪಿಯುಸಿ ವಿದ್ಯಾರ್ಥಿಗಳ ಸಹಿತ ಪೋಷಕರು ಪರೀಕ್ಷಾ ವೇಲಾಪಟ್ಟಿಯನ್ನು ಇಲಾಖಾ ಅಂತರ್ಜಾಲದಲ್ಲಿ ವೀಕ್ಷಿಸಸಲು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ.

ವೇಳಾಪಟ್ಟಿ ಹೀಗಿವೆ:ನವೆಂಬರ್ 29ರ ಸೋಮವಾರ ಬೆಳಗಿನ ಅವಧಿಯಲ್ಲಿ ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆದರೆ, ಮಧ್ಯಾಹ್ನದ ಅವಧಿಯಲ್ಲಿ ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೇಬಿಕ್ ಮತ್ತು ಫ್ರೆಂಚ್ ಭಾಷೆಯ ಪರೀಕ್ಷೆ ನಡೆಯಲಿದೆ.

ನವೆಂಬರ್ 30ರ ಮಂಗಳವಾರ: ದ್ವಿತೀಯ ಭಾಷೆ ಇಂಗ್ಲೀಷ್ ಭಾಷಾ ಪರೀಕ್ಷೆ ನಡೆಯಲಿದೆ.

ಡಿಸೆಂಬರ್ 1ರ ಬುಧವಾರ: ಇತಿಹಾಸ ಮತ್ತು ಭೌತಶಾಸ್ತ್ರ ಪರೀಕ್ಷೆ ನಡೆಯಲಿದೆ.

ಡಿಸೆಂಬರ್ 2ರ ಗುರುವಾರ: ಅರ್ಥಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ.

ಡಿಸೆಂಬರ್ 3ರ ಶುಕ್ರವಾರ: ರಾಜ್ಯಶಾಸ್ತ್ರ ಜೀವಶಾಸ್ತ್ರ ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ವಿಜ್ಞಾನ ಮತ್ತು ಭೂವಿಜ್ಞಾನ ಪರೀಕ್ಷೆ ನಡೆಯಲಿದೆ. ಮಧ್ಯಾಹ್ನದ ಅವಧಿಯಲ್ಲಿ ಹಿಂದೂಸ್ತಾನಿ ಸಂಗೀತ, ಅಂಕಿ ಅಂಶಗಳು ಪರೀಕ್ಷೆ ನಡೆಯಲಿದೆ.

ಡಿಸೆಂಬರ್ 8ರ ಬುಧವಾರ: ಬೆಳಗಿನ ಅವಧಿಯಲ್ಲಿ ವ್ಯವಹಾರ ಅಧ್ಯಯನ ಮತ್ತು ಮಧ್ಯಾಹ್ನದ ಅವಧಿಯಲ್ಲಿ ಐಚ್ಛಿಕ ಕನ್ನಡ ಪರೀಕ್ಷೆ ನಡೆಯಲಿದೆ.

ಡಿಸೆಂಬರ್ 9ರ ಗುರುವಾರ: ಬೆಳಗಿನ ಅವಧಿಯಲ್ಲಿ ಭೂಗೋಳಶಾಸ್ತ್ರ, ಮನಃಶಾಸ್ತ್ರ ಮತ್ತು ಮಧ್ಯಾಹ್ನದ ಅವಧಿಯಲ್ಲಿ ಮಾಹಿತಿ ತಂತ್ರಜ್ಞಾನ, ಆಟೋಮೊಬೈಲ್, ಆರೋಗ್ಯ ಸಲಹೆ ಪರೀಕ್ಷೆ ನಡೆಯಲಿದೆ.

ಡಿಸೆಂಬರ್ 10ರ ಬೆಳಗಿನ ಅವಧಿಯಲ್ಲಿ ಹಿಂದಿ ಮತ್ತು ಮಧ್ಯಾಹ್ನದ ಅವಧಿಯಲ್ಲಿ ಉರ್ದು, ಸಂಸ್ಕೃತ ಪರೀಕ್ಷೆ ನಡೆಯಲಿದೆ.

Leave A Reply

Your email address will not be published.