ರಾಮಕುಂಜ : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕೆರೆಗೆ ಬಿದ್ದು ಮೃತ್ಯು | ತಾವರೆ ಬಿಡಲು ಹೋದವಳು ವಾಪಾಸ್ ಬರಲೇ ಇಲ್ಲ

ನೆಲ್ಯಾಡಿ: ವಿದ್ಯಾರ್ಥಿನಿಯೋರ್ವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ನ.15ರಂದು ಬೆಳಿಗ್ಗೆ ನಡೆದಿದೆ. ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ(18ವ.)ಮೃತಪಟ್ಟ ದುರ್ದೈವಿ ವಿದ್ಯಾರ್ಥಿನಿಯಾಗಿದ್ದಾರೆ.

ಈಕೆ ಬೆಳಿಗ್ಗೆ ತಮ್ಮ ಮನೆ ಸಮೀಪದ ಕೆರೆಗೆ ತಾವರೆ ಹೂ ಬಿಡಲೆಂದು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆರೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕೆರೆಗೆ ತಾವರೆ ಹೂ ಬಿಡಲು ಹೋಗುವುದಾಗಿ ಹೇಳಿಹೋಗಿದ್ದ ಶ್ರೇಯಾ ಹಿಂತಿರುಗಿ ಬರದೇ ಇದ್ದ ಹಿನ್ನೆಲೆಯಲ್ಲಿ ಮನೆಯವರು ಕೆರೆಯ ಕಡೆ ಹೋಗಿದ್ದ ವೇಳೆ ಶ್ರೇಯಾ ಕೆರೆ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ವರದಿಯಾಗಿದೆ.


Ad Widget

Ad Widget

Ad Widget

1 thought on “ರಾಮಕುಂಜ : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕೆರೆಗೆ ಬಿದ್ದು ಮೃತ್ಯು | ತಾವರೆ ಬಿಡಲು ಹೋದವಳು ವಾಪಾಸ್ ಬರಲೇ ಇಲ್ಲ”

  1. That happens when u bring a phone to college and teachers took it and look all the watsup message and scold her for having contactact with mate hell teacher he scold her too much

Leave a Reply

error: Content is protected !!
Scroll to Top
%d bloggers like this: