ಶರಣ್ ಪಂಪ್‌ವೆಲ್‌ಗೆ ಮುಸ್ಲಿಮರ ಹಣ ಆಗುತ್ತದೆ,ಆದರೆ ಮುಸ್ಲಿಂ ಯುವಕರು ಯಾಕೆ ಆಗುವುದಿಲ್ಲ -ಬಿರುವೆರ್ ಕುಡ್ಲ ಪ್ರಶ್ನೆ

ಮಂಗಳೂರು : ಬಜರಂಗ ದಳದ ಮುಖಂಡ ಶರಣ್ ಪಂಪ್‌ವೆಲ್‌ಗೆ ಮುಸ್ಲಿಮರ ಹಣ ಆಗುತ್ತದೆ. ಆದರೆ ಮುಸ್ಲಿಂ ಯುವಕರು ಯಾಕೆ ಆಗುವುದಿಲ್ಲ ಎಂದು ಬಿರುವೆರ್ ಕುಡ್ಲ ಮಂಗಳೂರು ಪ್ರಶ್ನಿಸಿದೆ.

ಸೋಮವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಬಿರುವೆರ್ ಕುಡ್ಲ ಇದರ ಸಂಚಾಲಕ ಲಕ್ಷ್ಮೀಶ್ ಅವರು, ಈ ಹಿಂದೆ ನಡೆದ ಸಭೆಯೊಂದರಲ್ಲಿ ಶರಣ್ ಪಂಪ್‌ವೆಲ್ ಬಿರುವೆರ್ ಕುಡ್ಲ ಒಂದು ಜಾತಿಗೆ ಸೀಮಿತವಾಗಿದೆ ಎಂದಿದ್ದರು. ಬಿರುವೆರ್ ಕುಡ್ಲ ಸಮಾಜ ಸೇವೆಗಾಗಿ ಹುಟ್ಟಿಕೊಂಡ ಸಂಸ್ಥೆಯಾಗಿದೆ. ಏಳು ವರ್ಷಗಳಿಂದ ಸಂಸ್ಥೆ ಬಡವರಿಗೆ ಜಾತಿ ಭೇದ ನೋಡದೆ ಮೂರೂವರೆ ಕೋಟಿ ರೂ.ಗಳ ಸಹಾಯ ಮಾಡಿದೆ ಎಂದರು.

ಶರಣ್ ಪಂಪ್‌ವೆಲ್ ಬಿರುವೆರ್ ಕುಡ್ಲದ ಬಗ್ಗೆ ಮಾನಹಾನಿಯಾಗುವ ರೀತಿಯಲ್ಲಿ ಮಾತನಾಡಿದ್ದಾರೆ. ಹಾಗಾಗಿ ಅವರ ವಿರುದ್ಧ ಬಿರುವೆರ್ ಕುಡ್ಲ ಕಾನೂನು ಹೋರಾಟ ನಡೆಸಲಿದೆ ಎಂದು ಲಕ್ಷ್ಮೀಶ್ ತಿಳಿಸಿದರು.

Ad Widget

Ad Widget

Ad Widget

Ad Widget

Ad Widget

Ad Widget Ad Widget

Ad Widget

Ad Widget

ಬಿರುವೆರ್ ಕುಡ್ಲದ ದೀಪು ಶೆಟ್ಟಿಗಾರ್ ಮಾತನಾಡಿ, ಶರಣ್ ಪಂಪ್‌ವೆಲ್ ಅವರು ಸಿಟಿ ಸೆಂಟರ್ ಸಹಿತ ಹಲವು ಮುಸ್ಲಿಮರ ಕೇಂದ್ರಗಳಿಂದ ಗುತ್ತಿಗೆ ಹಿಡಿದು ಸಾಕಷ್ಟು ಹಣ ಸಂಪಾದಿಸುತ್ತಿದ್ದಾರೆ. ಹಿಂದುತ್ವದ ಹೆಸರಿನಲ್ಲಿ ಹೋರಾಟ ಮಾಡುವ ಅವರಿಗೆ ಮುಸ್ಲಿಮರ ಸಂಸ್ಥೆಯ ಹಣವಾಗುತ್ತದೆ, ಆದರೆ ಮುಸ್ಲಿಂ ಯುವಕರು ಬೇಡವಾಗಿದೆ. ಇದು ಎಷ್ಟು ಸರಿ ?,ನಾವು ಹೆಣ ಹೊರುವುದರಿಂದ ಹಿಡಿದು ಮನೆ ಕಟ್ಟಿ ಕೊಡುವವರೆಗೆ ಸಮಾಜ ಸೇವೆ ಮಾಡುತ್ತಿದ್ದೇವೆ. ಬಲ್ಲಾಳ್ ಬಾಗ್‌ನಲ್ಲಿ ಬಿರುವೆರ್ ಕುಡ್ಲ ಜನಪರ ಕೆಲಸ ಮಾಡಿದೆಯೇ ವಿನಃ ಶರಣ್ ಪಂಪ್‌ವೆಲ್‌ರಂತೆ ಸಮಾಜ ಒಡೆಯುವ ಕೆಲಸ
ಮಾಡಿಲ್ಲ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕಿಶೋರ್ ಬಾಬು, ವಿದ್ಯಾ, ರಾಕೇಶ್, ಉದಯ ಕುಮಾರ್ ಉಪಸ್ಥಿತರಿದ್ದರು.

Leave a Reply

error: Content is protected !!
Scroll to Top
%d bloggers like this: