of your HTML document.

ಬಿಟ್ ಕಾಯಿನ್ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ಪೊಲೀಸ್ ರಕ್ಷಣೆ ಸಿಗುತ್ತಾ ? ಎನ್ ಕೌಂಟರ್ ಆಗುತ್ತಾ? | ಕಾಂಗ್ರೆಸ್ ವಕ್ತಾರ ಸಂಕೇತ್ ಏಣಂಗಿ ಹೀಗ್ಯಾಕೆ ಹೇಳಿದ್ದು…

ಬೆಂಗಳೂರು : ಬಿಟ್ ಕಾಯಿನ್ ಹಗರಣ ರಾಜ್ಯ ರಾಜಕೀಯ ಹಾಗೂ ರಾಷ್ಟ್ರ ಮಟ್ಟದಲ್ಲೂ ಬಿರುಗಾಳಿ ಎಬ್ಬಿಸಿದೆ. ವಿರೋಧ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಬಿಜೆಪಿ ಸರ್ಕಾರದ ಮೇಲೆ ಮುಗಿಬಿದ್ದಿದ್ದಾರೆ. ಹಗರಣದಲ್ಲಿರುವ ಹೆಸರುಗಳನ್ನ ಬಹಿರಂಗಗೊಳಿಸಿ. ಇಡಿ, ಸಿಬಿಐ ತನಿಖೆಗೆ ಒತ್ತಾಯಿಸುತ್ತಿವೆ.

ಬಿಟ್ ಕಾಯಿನ್ ಪ್ರಕರಣದಲ್ಲಿ ಪ್ರತಿ ಪಕ್ಷ ಕಾಂಗ್ರೆಸ್, ಬಿಜೆಪಿ ವಿರುದ್ಧ ಹೋರಾಟವನ್ನು ತೀವ್ರಗೊಳಿಸುತ್ತಿದ್ದಾರೆ.ಇಷ್ಟು ಗಂಭೀರವಾಗಿರುವ ಬಿಟ್ ಕಾಯಿನ್‌ ಬಗ್ಗೆ ರಾಜ್ಯ ಮಾತ್ರವಲ್ಲ ಇಡೀ ದೇಶದೆಲ್ಲೆಡೆ ಭಾರೀ ಚರ್ಚೆಯಾಗುತ್ತಿದೆ.

ಈ ಬಿಟ್ ಕಾಯಿನ್ ಈಗ ರಾಜಕೀಯ ಕೆಸರೆರಚಾಟಕ್ಕೆ ನಾಂದಿ ಹಾಡಿದೆ.
ಬಿಟ್ ಕಾಯಿನ್ ಕಿಂಗ್ ಪಿನ್ ಶ್ರೀಕಿ ಕುರಿತು ಮಾಜಿ ಸೀಎಂ ಸಿದ್ದರಾಮಯ್ಯ ಅವರು ,ಶ್ರೀಕಿ ಅವರಿಗೆ ಪೊಲೀಸ್ ರಕ್ಷಣೆ ನೀಡಬೇಕು ಎಂದಿದ್ದರೆ,ಕಾಂಗ್ರೇಸ್ ವಕ್ತಾರ ಸಂಕೇತ್ ಏಣಂಗಿ ಅವರು ಬೆಳಗ್ಗೆ ಟ್ವಿಟ್ ಮಾಡಿ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಉತ್ತರ ಪ್ರದೇಶದ ಅಪರಾಧಗಳಲ್ಲಿಯ ತನ್ನ ಪಾತ್ರ ಬಹಿರಂಗವಾಗದಂತೆ ಬಿಜೆಪಿ ಸರ್ಕಾರ ಪೊಲೀಸ್ ಎನ್‌ಕೌಂಟರ್ ಮುಖೇನ ಆರೋಪಿ ವಿಕಾಸ ದುಬೆಯ ಹತ್ಯೆಯಂತೆಯೇ ಕರ್ನಾಟಕದ ಬಿಜೆಪಿ ಸರ್ಕಾರ ತನ್ನ ಪಕ್ಷದವರ ರಕ್ಷಣೆಗೋಸ್ಕರ ಬಿಟ್‌ಕಾಯಿನ್ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯ ಪೊಲೀಸ್ ಎನ್ ಕೌಂಟರ್ ಮಾಡುವ ಸಾಧ್ಯತೆ ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಗ್ಯಾಂಗ್‌ಸ್ಟರ್‌ ವಿಕಾಸ್ ದುಬೆಯನ್ನು ಮಧ್ಯಪ್ರದೇಶದಲ್ಲಿ
ಉಜ್ಜಯಿನಿಯಲ್ಲಿ ಬಂಧಿಸಲಾಗಿತ್ತು. ಆದರೆ, ಮಧ್ಯಪ್ರದೇಶದ ಉಜ್ಜಯಿನಿಯಿಂದ ಉತ್ತರ ಪ್ರದೇಶದ ಶಿವಿಗೆ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಪೊಲೀಸ್ ಕಾರ್ ಕಾನ್ಸುರದ ಬಳಿ ಪಲ್ಟಿಯಾಗಿತ್ತು. ಈ ವೇಳೆ ವಿಕಾಸ್ ದುಬೆ ಪೊಲೀಸರ ಬಳಿ ಇದ್ದ ಗನ್ ಕಿತ್ತುಕೊಂಡು, ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದ. ಕೂಡಲೇ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿತ್ತು.

Leave A Reply

Your email address will not be published.