ನಿರಂತರ ಮಳೆ ಹಲವು ಜಿಲ್ಲೆಗಳಲ್ಲಿ ಶಾಲಾ,ಕಾಲೇಜಿಗೆ ರಜೆ, ಯೆಲ್ಲೋ ಅಲರ್ಟ್ ಘೋಷಣೆ

Share the Article

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಮತ್ತಷ್ಟು ತೀವ್ರ ಸ್ವರೂಪ ಪಡೆದಿದ್ದು, ಇಂದಿನಿಂದ ಒಂದು ವಾರ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರ ಮಳೆಮುಂದುವರೆಯುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು,ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಪರಿಸ್ಥಿತಿ ಅವಲೋಕಿಸಿ ಶಾಲೆ-ಕಾಲೇಜುಗಳಿಗೆ ರಜೆ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

Leave A Reply