ಮಾಜಿ ಕಾರ್ಪೊರೇಟರ್ ಎಂ.ಬಿ.ಶಿವಪ್ಪ ನೇಣು ಬಿಗಿದು ಆತ್ಮಹತ್ಯೆ

Share the Article

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬಿಜೆಪಿ ಮುಖಂಡ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಮಾಜಿ ಕಾರ್ಪೊರೇಟರ್ ಎಂ.ಬಿ. ಶಿವಪ್ಪ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು‌.

ಬೆಂಗಳೂರು ಅತ್ತಿಗುಪ್ಪೆ ಸಮೀಪದ ಬಿಸಿಸಿ ಲೇಔಟ್ ನಿವಾಸಿಯಾದ ಶಿವಪ್ಪ, ಪತ್ನಿ ಮತ್ತು ಇಬ್ಬರು ಮಕ್ಕಳ ಜತೆ ವಾಸವಿದ್ದರು.

ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಶಿವಪ್ಪ ಅವರ ಪುತ್ರ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave A Reply