ಬಂಟ್ವಾಳ : ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಹೆಗಡೆಗುಳಿ ಎಂಬಲ್ಲಿ ಕಾಡುಪ್ರಾಣಿಗಳಿಗೆ ಇಟ್ಟಿದ್ದ ಉರುಳಿಗೆ ಚಿರತೆ ಸಿಲುಕಿದ್ದು ಪಶುವೈದ್ಯ ಡಾ. ಯಶಸ್ವಿ ಅವರ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳ ತಂಡ ಚಿರತೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದೆ.
ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿ ಹಿಡಿಯುವ ಮೂಲಕ ಪಿಲಿಕುಳಕ್ಕೆ ಸಾಗಿಸಲಾಗಿದೆ.