ಶಿಕ್ಷಣದಿಂದ ಸ್ವಸ್ಥ ಸಮಾಜದ ನಿರ್ಮಾಣ ಸಾಧ್ಯ: ಶ್ರೀ ಕಶೆಕೋಡಿ ಸೂರ್ಯನಾರಾಯಣ ಭಟ್.
ಕಡಬ: ವಿದ್ಯಾರ್ಥಿಗಳು ಸಾಧಕರ ಜೀವನವನ್ಬು ಆದರ್ಶವಾಗಿಟ್ಟುಕೊಳ್ಳಬೇಕು. ಇದಕ್ಕೆ ಸಂಸ್ಕಾರಭರಿತ ಶಿಕ್ಷಣವೂ ಅಗತ್ಯ. ಶಿಕ್ಷಣದಿಂದಲೇ ಸ್ವಸ್ಥ ಸಮಾಜದ ನಿರ್ಮಾಣ ಸಾಧ್ಯ ಎಂದು ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಹೇಳಿದರು. ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನಲ್ಲಿ ನಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಮತ್ತು ಸಾಧಕ ಉಪನ್ಯಾಸಕರಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶ್ರೀರಾಮಕುಂಜೇಶ್ವರ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿ , ಎಂಅರ್ ಪಿ ಎಲ್ ಉದ್ಯೋಗಿ ಸ್ವರಾಜ್ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬ ಜೀವನದ ಸಾಧನೆಯ ಹಿಂದಿನ ಶಕ್ತಿಯಾಗುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಎಂದರು.
ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾ ದ ಸಂಚಾಲಕ ನಾರಾಯಣ ಭಟ್ ಮಾತನಾಡಿದರು.
ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾ ದ ಕಾರ್ಯದರ್ಶಿಗ ರಾಧಾಕೃಷ್ಣಕೆ.ಎಸ್ ಅಧ್ಯಕ್ಷತೆ ವಹಿಸಿದ್ದರು.
C.S ಪರೀಕ್ಷೆಯಲ್ಲಿ ಉತ್ತೀರ್ಣ ರಾದ ಕಾಲೇಜಿನ ಹಿರಿಯ ವಿದ್ಯಾರ್ಥಿ ಸ್ವರಾಜ್ ರೈ, C.A ಯ ಮೊದಲ ಹಂತದ ಪರೀಕ್ಷೆಯಲ್ಲಿ ಉತ್ತೀರ್ಣ ರಾದ ಅಂತಿಮ ಬಿಕಾಂ ವಿದ್ಯಾರ್ಥಿನಿ ಕು.ಶರಧಿ.ಕೆ, ಕೆ.ಸೆಟ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಉಪನ್ಯಾಸಕರಾದ ಸುಜಿತ್ ಕುಮಾರ್, ಶರತ್,ಹಾಗೂ ಮಂಗಳೂರು ವಿವಿ ಕನ್ನಡ ಸ್ನಾತಕೋತ್ತರ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದ ಸುರಕ್ಷಿತ ಶೆಟ್ಟಿ ಅವರುಗಳಿಗೆ ಗೌರವಾರ್ಪಣೆ ನಡೆಯಿತು. ಪ್ರಥಮ ಪದವಿ ಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಪ್ರಾಂಶುಪಾಲ ಗಣರಾಜ ಕುಂಬ್ಳೆ ಪ್ರಾಸ್ತಾವಿಸಿ ಸ್ವಾಗತಿಸಿದರು. ಉಪನ್ಯಾಸಕಿ ಸುಜಾತ ವಂದಿಸಿದರು. .ಉಪನ್ಯಾಸಕ ಗುರುಕಿರಣ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.