of your HTML document.

ಈ ಬಾರಿಯೂ ಎಸ್ ಎಸ್ ಎಲ್ ಸಿ ಪರೀಕ್ಷೆ ವಿಳಂಬ ಸಾಧ್ಯತೆ|ಮೇ ಜೂನ್ ವೇಳೆಗೆ ನಡೆಸಲು ಶಿಕ್ಷಣ ಇಲಾಖೆ ಚಿಂತನೆ!

ಬೆಂಗಳೂರು :ಕೊರೋನ ಮಹಾಮಾರಿಯ ಪರಿಣಾಮ ಈ ಬಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ತರಗತಿ ಹಾಜರಾಗಲು ತಡೆಯಾದ ಕಾರಣ,ಪಠ್ಯಕ್ರಮ ಪರಿಪೂರ್ಣಗೊಳಿಸಲು ಕಾಲಾವಕಾಶ ಸಿಗದ ಹಿನ್ನಲೆಯಲ್ಲಿ ಈ ಬಾರಿಯೂ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ವಿಳಂಬ ಆಗುವ ಸಾಧ್ಯತೆ ಇದೆ.

2021-22 ನೇ ಸಾಲಿನ ಶೈಕ್ಷಣಿಕ ಅವಧಿ ವಿಳಂಬ ಹಾಗೂ ಪಠ್ಯಕ್ರಮ ಪರಿಪೂರ್ಣಗೊಳಿಸಲು ಕಾಲಾವಕಾಶದ ಅವಶ್ಯಕತೆ ಇರುವುದರಿಂದ ಎಸ್‌ಎಸ್‌ಎಲ್ ಸಿ ಪರೀಕ್ಷೆಯನ್ನು ಮೇ ಜೂನ್ ವೇಳೆಗೆ ನಡೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎನ್ನಲಾಗಿದೆ.

ಪ್ರತಿ ವರ್ಷ ಮಾರ್ಚ್ ಕೊನೆಯ ವಾರದಿಂದ ಏಪ್ರಿಲ್ ಮೊದಲ ವಾರದೊಳಗೆ ಎಸ್‌ಎಸ್‌ಎಲ್ ಸಿ ಪರೀಕ್ಷೆ ಮುಗಿಯುತ್ತಿತ್ತು. ಈ ಬಾರಿ ನವೆಂಬರ್ ಮುಗಿಯುತ್ತಿದ್ದರೂ ಅಧಿಸೂಚನೆ ಹೊರಡಿಸಿಲ್ಲ. ಹೀಗಾಗಿ ಈ ಬಾರಿಯೂ ಎಸ್‌ಎಸ್‌ಎಲ್ ಸಿ ಪರೀಕ್ಷೆ ವಿಳಂಬವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Leave A Reply

Your email address will not be published.