ಮಂಗಳೂರು ವಿಶ್ವ ವಿದ್ಯಾಲಯ : ನಾಳೆ ಪದವಿ ಪರೀಕ್ಷಾ ಫಲಿತಾಂಶ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ವಿದ್ಯಾರ್ಥಿಗಳಿಗೆ ಎಪ್ರಿಲ್ ನಲ್ಲಿ ನಡೆಸಿದ ಸೆಮಿಸ್ಟರ್ (1, 3 ಮತ್ತು 5) ಪರೀಕ್ಷೆಗಳ ಫಲಿತಾಂಶವನ್ನು ಅಭ್ಯರ್ಥಿಗಳಿಗೆ ನ. 23ರಂದು ವಿ.ವಿ.ಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ವಿ.ವಿ. ಕುಲಸಚಿವ (ಮೌಲ್ಯಮಾಪನ) ಡಾ| ಪಿ.ಎಲ್. ಧರ್ಮ ತಿಳಿಸಿದ್ದಾರೆ.

ಅಂಕಗಳನ್ನು ವೆಬ್‌ಸೈಟ್‌ಗೆ ಅಪ್‌ ಲೋಡ್ ಮಾಡುವ ಮೂಲಕ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಆರನೇ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶವನ್ನು ವಿದ್ಯಾರ್ಥಿಗಳು ಪಡೆದುಕೊಂಡ ಇಂಟರ್‌ನಲ್ ಅಂಕಗಳನ್ನು ಅಪ್‌ಲೋಡ್ ಮಾಡಿ ಮುಂದಿನ ವಾರದೊಳಗೆ ಪ್ರಕಟಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

Leave a Reply

error: Content is protected !!
Scroll to Top
%d bloggers like this: