ವಿಧಾನ ಪರಿಷತ್ ಚುನಾವಣೆ ; ಎಸ್ ಡಿಪಿಐ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ನಾಮಪತ್ರ ಸಲ್ಲಿಕೆ

ಮಂಗಳೂರು: ಡಿಸೆಂಬರ್ 10 ರಂದು ನಡೆಯುವ ದ.ಕ.ಜಿಲ್ಲಾ ವಿಧಾನ ಪರಿಷತ್ ಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆಯವರು ಇಂದು ಚುನಾವಣಾಧಿಕಾರಿ ಡಾ|ರಾಜೇಂದ್ರ ಕೆ.ವಿ ಯವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಸ್ ಡಿ ಪಿ ಐ ಉಡುಪಿ ಜಿಲ್ಲಾಧ್ಯಕ್ಷ ನಝೀರ್ ಅಹಮ್ಮದ್, ದ.ಕ. ಜಿಲ್ಲಾ ಉಪಾಧ್ಯಕ್ಷ ವಿಕ್ಟರ್ ಮಾರ್ಟಿಸ್, ದ.ಕ.ಜಿಲ್ಲಾ ಕಾರ್ಯದರ್ಶಿಗಳಾದ ಅಕ್ಬರ್ ಬೆಳ್ತಂಗಡಿ , ಶಾಕೀರ್ ಅಳಕೆ ಮಜಲು ಉಪಸ್ಥಿತಿತರಿದ್ದರು ಎಂದು ದ.ಕ ಜಿಲ್ಲಾ ಎಸ್ ಡಿ ಪಿ ಐ ಕಾರ್ಯ ದರ್ಶಿ ಶಾಕಿರ್ ಅಳಕೆಮಜಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.